×
Ad

ಸ್ಕೂಟರ್‌ಗೆ ಡಿಕ್ಕಿ ಹೊಡೆದು 50 ಮೀಟರ್‌ ದೂರ ಎಳೆದೊಯ್ದ ಬಿಎಂಡಬ್ಲ್ಯು ಕಾರು, ಸವಾರ ಮೃತ್ಯು

Update: 2024-02-04 14:11 IST

Photo : indiatoday.in

ಚೆನ್ನೈ : ತಮಿಳುನಾಡಿನ ಕಾಂಚೀಪುರಂನಲ್ಲಿ ದ್ವಿಚಕ್ರ ವಾಹನಕ್ಕೆ ವೇಗವಾಗಿ ಬಂದ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದು, 50 ಮೀಟರ್ ಎಳೆದೊಯ್ದ ಪರಿಣಾಮ ಸವಾರ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ ಎಂದು indiatoday.in ವರದಿ ಮಾಡಿದೆ.

ಮೃತಪಟ್ಟವರನ್ನು ಬಾಲಕ ಬಾಲಮುರುಗನ್ ಎಂದು ಗುರುತಿಸಲಾಗಿದೆ. ಅವರು ತಮ್ಮ ಸ್ನೇಹಿತ ರಮೇಶ್ ಜೊತೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಅಯ್ಯಂಗಾರ್ ಕಲಾಂ ಪ್ರದೇಶವನ್ನು ದಾಟುತ್ತಿದ್ದಂತೆ, ಎದುರು ದಿಕ್ಕಿನಿಂದ ಬಂದ ಎಸ್‌ಯುವಿ ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಸಿಸಿಟಿವಿ ಕ್ಯಾಮೆರಾದಲ್ಲಿ ಅಪಘಾತದ ವೀಡಿಯೊ ಸೆರೆಯಾಗಿದ್ದು, ಎಸ್‌ಯುವಿ ಕಾರು ದ್ವಿಚಕ್ರ ವಾಹನವನ್ನು ಸುಮಾರು 50 ಮೀಟರ್‌ಗಳವರೆಗೆ ಎಳೆದುಕೊಂಡು ಹೋಗಿರುವುದನ್ನು ತೋರಿಸಿದೆ. ತೀವ್ರವಾಗಿ ಗಾಯಗೊಂಡಿರುವ ಬಾಲಮುರುಗನ್ ಮತ್ತು ರಮೇಶ್ ಅವರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿತ್ತು. ಬಾಲಮುರುಗನ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.ರಮೇಶ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News