×
Ad

ಮಧ್ಯಪ್ರದೇಶ| ಬಾಂಬ್ ನಿಷ್ಕ್ರಿಯ ದಳದ ವಾಹನ ಟ್ರಕ್‌ಗೆ ಢಿಕ್ಕಿ: ನಾಲ್ವರು ಪೊಲೀಸರು ಮೃತ್ಯು

Update: 2025-12-10 11:08 IST

Photo | PTI

ಭೋಪಾಲ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳದ ವಾಹನವೊಂದು ಕಂಟೇನರ್ ಟ್ರಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಪೊಲೀಸ್‌ ಸಿಬ್ಬಂದಿ ಮೃತಪಟ್ಟಿದ್ದಾರೆ.

ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಬಾಂದ್ರಿ ಮತ್ತು ಮಾಲ್ಥೋನ್ ಪ್ರದೇಶಗಳ ನಡುವೆ ಇರುವ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಬುಧವಾರ ಬೆಳಿಗ್ಗೆ 4 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬಾಂಬ್ ಪತ್ತೆ ದಳದ ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ವಾಹನ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಂಟೇನರ್ ಟ್ರಕ್‌ಗೆ ಢಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ತೀವ್ರತೆಗೆ ನಾಲ್ವರು ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಬಾಂದ್ರಿ ಪೊಲೀಸ್ ಠಾಣೆಯ ಉಸ್ತುವಾರಿ ಸುಮೇರ್ ಜಗತ್ ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡ ಕಾನ್ಸ್ಟೆಬಲ್‌ನನ್ನು ರಾಜಿಕ್ ಚೌಹಾಣ್ ಎಂದು ಗುರುತಿಸಲಾಗಿದೆ. ಅವರನ್ನು ತಕ್ಷಣ ಭೋಪಾಲ್‌ನ ಬನ್ಸಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News