×
Ad

ದಿಲ್ಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ: ಪೊಲೀಸರಿಂದ ತೀವ್ರ ಶೋಧ

Update: 2025-08-18 10:12 IST

Photo | ndtv

ಹೊಸದಿಲ್ಲಿ : ಸೋಮವಾರ ಮುಂಜಾನೆ ರಾಷ್ಟ್ರ ರಾಜಧಾನಿ ದಿಲ್ಲಿಯ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಿಲ್ಲಿ ಪೊಲೀಸರ ಪ್ರಕಾರ, ದ್ವಾರಕಾದ ಸೆಕ್ಟರ್ 10ರಲ್ಲಿರುವ ದಿಲ್ಲಿ ಪಬ್ಲಿಕ್ ಸ್ಕೂಲ್ (ಡಿಪಿಎಸ್), ಮಾಡ್ರನ್ ಕಾನ್ವೆಂಟ್ ಸ್ಕೂಲ್ ಮತ್ತು ಶ್ರೀರಾಮ್ ವರ್ಲ್ಡ್ ಸ್ಕೂಲ್‌ಗೆ ಇಮೇಲ್ ಮೂಲಕ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ.

ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ತಂಡಗಳು ಸ್ಥಳಕ್ಕೆ ತೆರಳಿ ಶೋಧ ಕಾರ್ಯಚರಣೆ ಆರಂಭಿಸಿದೆ.

ಜುಲೈನಲ್ಲಿ ದಿಲ್ಲಿಯ 45 ಶಾಲೆಗಳು ಮತ್ತು ಮೂರು ಕಾಲೇಜುಗಳಿಗೆ ಬಾಂಬ್‌ ಬೆದರಿಕೆ ಇಮೇಲ್‌ಗಳನ್ನು ಕಳುಹಿಸಲಾಗಿತ್ತು. ಕಳೆದ ಮೇ ತಿಂಗಳಲ್ಲಿ ದಿಲ್ಲಿಯ 300 ಶಾಲೆಗಳಿಗೆ ಇಮೇಲ್ ಮೂಲಕ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News