ಕರೂರು ಕಾಲ್ತುಳಿತ | ನಟ ವಿಜಯ್ ನಿವಾಸಕ್ಕೆ ಹುಸಿ ಬಾಂಬ್ ಬೆದರಿಕೆ
Update: 2025-10-09 15:28 IST
Photo|indiatoday
ಚೆನ್ನೈ: ಕರೂರು ಕಾಲ್ತುಳಿತ ಘಟನೆಯ ವಿವಾದದ ಮಧ್ಯೆ ನಟ, ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ ಪಕ್ಷದ ಮುಖ್ಯಸ್ಥ ವಿಜಯ್ ಅವರ ಚೆನ್ನೈ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆಯನ್ನು ನಡೆಸಿದ್ದಾರೆ.
ಭವಿಷ್ಯದಲ್ಲಿ ಏನಾದರೂ ಸಾರ್ವಜನಿಕ ಸಭೆಗಳನ್ನು ಆಯೋಜಿಸಿದರೆ ಚೆನ್ನೈನ ನೀಲಂಗರೈನಲ್ಲಿರುವ ನಿವಾಸದ ಮೇಲೆ ಬಾಂಬ್ ದಾಳಿ ನಡೆಸಲಾಗುವುದು ಎಂದು ಅನಾಮಧೇಯ ವ್ಯಕ್ತಿ ಬೆದರಿಕೆ ಹಾಕಿದ್ದಾನೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆಯನ್ನು ನಡೆಸಿದ್ದಾರೆ. ಈ ವೇಳೆ ಹುಸಿ ಬಾಂಬ್ ಬೆದರಿಕೆ ಎನ್ನುವುದು ಬಹಿರಂಗವಾಗಿದೆ.
ಇದರ ಬೆನ್ನಿಗೇ ವಿಜಯ್ ನಿವಾಸದ ಸುತ್ತ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.