2013ರ ಅತ್ಯಾಚಾರ ಪ್ರಕರಣ | ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಬಾಂಬೆ ಹೈಕೋರ್ಟ್
Update: 2026-08-06 14:30 IST
Photo |livelaw
ಮುಂಬೈ: 2013ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಹಲ್ಕಾ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಅವರಿಗೆ ಬಾಂಬೆ ಹೈಕೋರ್ಟ್ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬಾಂಬೆ ಹೈಕೋರ್ಟ್ ತರುಣ್ ತೇಜ್‌ಪಾಲ್ ಅವರನ್ನು ದೋಷಿಯೆಂದು ತೀರ್ಪು ನೀಡಿತ್ತು. ಇದರೊಂದಿಗೆ, 2021ರಲ್ಲಿ ಗೋವಾದ ವಿಚಾರಣಾ ನ್ಯಾಯಾಲಯ ನೀಡಿದ್ದ ಖುಲಾಸೆ ತೀರ್ಪನ್ನು ರದ್ದುಗೊಳಿಸಿತ್ತು.
2013ರ ನವೆಂಬರ್‌ನಲ್ಲಿ ತೆಹಲ್ಕಾ ನಿಯತಕಾಲಿಕೆಯ ವಾರ್ಷಿಕ 'ಥಿಂಕ್‌ಫೆಸ್ಟ್' ಕಾರ್ಯಕ್ರಮದ ಸಂದರ್ಭದಲ್ಲಿ ಗೋವಾದ ರೆಸಾರ್ಟ್ ನ ಲಿಫ್ಟ್‌ನಲ್ಲಿ ಸಂಸ್ಥೆಯ ಮಹಿಳಾ ಉದ್ಯೋಗಿಯ ಮೇಲೆ ತೇಜ್‌ಪಾಲ್ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ದೂರಿನ ಆಧಾರದ ಮೇಲೆ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.