×
Ad

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಬಾಕ್ಸರ್‌ ವಿಜೇಂದರ್‌ ಸಿಂಗ್‌

Update: 2024-04-03 15:29 IST

Screengrab:X/@ANI

ಹೊಸದಿಲ್ಲಿ: ಬಾಕ್ಸರ್‌ ವಿಜೇಂದರ್‌ ಸಿಂಗ್‌ ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ವಾರಗಳಿವೆಯೆನ್ನುವಾಗ ಕಾಂಗ್ರೆಸ್‌ ತೊರೆದು ಇಂದು ಬಿಜೆಪಿ ಸೇರಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ದಿಲ್ಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು ರಮೇಶ್‌ ಬಿಧೂರಿ ಅವರೆದುರು ಸೋತಿದ್ದರು. ದಿಲ್ಲಿಯ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ನಾಯಕರ ಸಮ್ಮುಖದಲ್ಲಿ ವಿಜೇಂದರ್ ಸಿಂಗ್ ಅವರು ಬಿಜೆಪಿ ಸೇರಿದ್ದಾರೆ.

‘ದೇಶದ ಅಭಿವೃದ್ಧಿ ಮತ್ತು ಜನರ ಸೇವೆಗಾಗಿ ನಾನು ಬಿಜೆಪಿಗೆ ಸೇರಿದ್ದೇನೆ’ ಎಂದು ವಿಜೇಂದರ್ ಸಿಂಗ್ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News