×
Ad

ಕುಸ್ತಿ ಫೆಡರೇಷನ್‌ ನೂತನ ಅಧ್ಯಕ್ಷರಾಗಿ ಬ್ರಿಜ್‌ ಭೂಷಣ್‌ ಸಿಂಗ್‌ ಆಪ್ತ ಸಂಜಯ್‌ ಸಿಂಗ್‌ ಆಯ್ಕೆ

Update: 2023-12-21 15:40 IST
Photo: NDTV

ಹೊಸದಿಲ್ಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತದ ಕುಸ್ತಿ ಫೆಡರೇಷನ್‌ನ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರ ಸಮೀಪವರ್ತಿಯೆಂದೇ ತಿಳಿಯಲಾದ ಸಂಜಯ್‌ ಸಿಂಗ್‌ ಇಂದು ಫೆಡರೇಷನ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸಂಜಯ್‌ ಸಿಂಗ್‌ ಅವರು ಒಟ್ಟು 47 ಮತಗಳ ಪೈಕಿ 40 ಮತಗಳನ್ನು ಪಡೆದು ವಿಜೇತರಾದರು. ಅವರಿಗೆದುರಾಗಿ ಕಾಮನ್‌ವೆಲ್ತ್‌ ಚಿನ್ನದ ಪದಕ ವಿಜೇತೆ ಅನಿತಾ ಶಿಯೋರನ್‌ ಸ್ಪರ್ಧಿಸಿದ್ದರು. ಕೆಲ ತಿಂಗಳುಗಳ ಹಿಂದೆ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಪ್ರತಿಭಟನೆ ನಡೆಸಿದ್ದ ಖ್ಯಾತನಾಮ ಕುಸ್ತಿಪಟುಗಳ ಬೆಂಬಲ ಅನಿತಾ ಅವರಿಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News