ಏರ್ ಇಂಡಿಯಾ ವಿಮಾನ ದುರಂತ : ಅಹ್ಮದಾಬಾದ್‌ಗೆ ಆಗಮಿಸಿದ ಬ್ರಿಟಿಷ್ ಹೈಕಮಿಷನ್ ಅಧಿಕಾರಿಗಳು
Update: 2025-06-13 10:58 IST
Photo | ANI
ಹೊಸದಿಲ್ಲಿ : ಏರ್ ಇಂಡಿಯಾ ವಿಮಾನ ದುರಂತದ ಹಿನ್ನೆಲೆ ಬ್ರಿಟಿಷ್ ಹೈಕಮಿಷನ್ ಅಧಿಕಾರಿಗಳು ಅಹ್ಮದಾಬಾದ್‌ಗೆ ಆಗಮಿಸಿದ್ದಾರೆ.
ಏರ್ ಇಂಡಿಯಾ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನ ಗುರುವಾರ ಅಹ್ಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತ್ತು. ಘಟನೆಯಲ್ಲಿ 265 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ 53 ಮಂದಿ ಬ್ರಿಟಿಷ್ ಪ್ರಜೆಗಳಿದ್ದರು.