×
Ad

ದಿಲ್ಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್, ಪತ್ನಿ ಅಕ್ಷತಾ ಮೂರ್ತಿ

Update: 2023-09-10 10:43 IST

Photo: Twitter@NDTV

ಹೊಸದಿಲ್ಲಿ: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಇಂದು ತಮ್ಮ ಪತ್ನಿ ಅಕ್ಷತಾ ಮೂರ್ತಿ ಅವರೊಂದಿಗೆ ದಿಲ್ಲಿಯ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದರು.

ಎರಡು ದಿನಗಳ G20 ಶೃಂಗಸಭೆಯಲ್ಲಿ ಭಾಗವಹಿಸಲು ಸುನಕ್ ದಿಲ್ಲಿಯಲ್ಲಿದ್ದಾರೆ, ಶೃಂಗ ಸಭೆಯಲ್ಲಿ ವಿಶ್ವ ನಾಯಕರು ವಿಶ್ವದ ಕೆಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

ಬ್ರಿಟನ್ ಪ್ರಧಾನಿಯಾದ ನಂತರ ರಿಷಿ ಸುನಕ್ ಅವರ ಮೊದಲ ಅಧಿಕೃತ ಭಾರತ ಭೇಟಿ ಇದಾಗಿದೆ.

ಸುನಕ್ ಭೇಟಿಯ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಮುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.

ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಸುನಕ್ ಅವರು ಮಹಾತ್ಮಾ ಗಾಂಧಿಯವರಿಗೆ ಗೌರವ ಸಲ್ಲಿಸಲು ಇತರ ಪ್ರತಿನಿಧಿಗಳೊಂದಿಗೆ ರಾಜ್ ಘಾಟ್ ಗೆ ತೆರಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News