×
Ad

ಜಾರ್ಖಂಡ್ ನಲ್ಲಿ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ: 6 ಕನ್ವರಿಯಾಗಳು ಮೃತ್ಯು, 24 ಮಂದಿಗೆ ಗಾಯ

Update: 2025-07-29 11:16 IST

Photo credit: PTI

ರಾಂಚಿ: ಕನ್ವರ್ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಕನ್ವರ್ ಯಾತ್ರಾರ್ಥಿಗಳು ಮೃತಪಟ್ಟಿದ್ದು, 24 ಮಂದಿ ಗಾಯಗೊಂಡ ಘಟನೆ ಜಾರ್ಖಂಡ್ ನ ಡಿಯೋಗಢ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

ಇಂದು (ಮಂಗಳವಾರ) ಮುಂಜಾನೆ ಸುಮಾರು 4.30ರ ವೇಳೆಗೆ ಮೋಹನ್ ಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯ ಅರಣ್ಯದ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಡುಮ್ಕಾ ವಲಯದ ಮಹಾ ನಿರೀಕ್ಷಕ ಶೈಲೇಂದ್ರ ಕುಮಾರ್ ಸಿನ್ಹಾ, “ದಿಯೊಗಢದಲ್ಲಿನ ಮೋಹನ್ ಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಜಮುನಿಯ ಅರಣ್ಯದ ಬಳಿ ಅನಿಲ ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದ ಟ್ರಕ್ ಒಂದಕ್ಕೆ ಬಸ್ ಢಿಕ್ಕಿ ಹೊಡೆದಿದೆ” ಎಂದು ತಿಳಿಸಿದ್ದಾರೆ.

ಈ ಅಪಘಾತದ ಕುರಿತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News