×
Ad

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಜಾತಿವಾರು ಸಮೀಕ್ಷೆ: ಮಲ್ಲಿಕಾರ್ಜುನ್‌ ಖರ್ಗೆ ಭರವಸೆ

Update: 2023-08-22 18:20 IST

ಮಲ್ಲಿಕಾರ್ಜುನ ಖರ್ಗೆ | Photo: PTI 

ಭೋಪಾಲ್:‌ ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಗೆದ್ದ ನಂತರ ಕಾಂಗ್ರೆಸ್ ಜಾತಿ ಗಣತಿ ನಡೆಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಹೇಳಿದ್ದಾರೆ.‌

ಮಧ್ಯಪ್ರದೇಶದ ಬುಂದೇಲ್‌ಖಂಡ್ ಪ್ರದೇಶದ ಸಾಗರದಲ್ಲಿ ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೋದಿ ನೇತೃತ್ವದ ಆಡಳಿತವು ಸಂವಿಧಾನವನ್ನು ಬದಲಾಯಿಸಲು ಬಯಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಕೆಲವರು ಸಂವಿಧಾನವನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ. ದೇಶದ 140 ಕೋಟಿ ಜನರು ಸಂವಿಧಾನದ ರಕ್ಷಣೆಗೆ ಬೆಂಬಲ ನೀಡುತ್ತಿರುವುದರಿಂದ ಇದು ಸಾಧ್ಯವಾಗಿಲ್ಲ ಎಂದು ಅವರು ಹೇಳಿದರು.

ಮಧ್ಯಪ್ರದೇಶದಲ್ಲಿ ಈ ವರ್ಷದ ಕೊನೆಯಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮಧ್ಯಪ್ರದೇಶದಲ್ಲಿ ಜಾತಿವಾರು ಜನಗಣತಿ ನಡೆಸಲಾಗುವುದು ಎಂದು ಖರ್ಗೆ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News