ಮೇವು ಹಗರಣದಲ್ಲಿ ಲಾಲು ಪ್ರಸಾದ್ ಯಾದವ್ ಗೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಸಿಬಿಐ
Update: 2023-08-18 12:40 IST
Photo: PTI
ಹೊಸದಿಲ್ಲಿ : ಮೇವು ಹಗರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ನೀಡಿರುವ ಜಾಮೀನನ್ನು ಪ್ರಶ್ನಿಸಿ ಕೇಂದ್ರೀಯ ತನಿಖಾ ದಳ(CBI) ಸುಪ್ರೀಂ ಕೋರ್ಟ್ ನ ಮೊರೆ ಹೋಗಿದೆ. ನ್ಯಾಯಾಲಯವು ಆಗಸ್ಟ್ 25 ರಂದು ಅರ್ಜಿಯ ವಿಚಾರಣೆ ನಡೆಸಲಿದೆ.
ರಾಷ್ಟ್ರೀಯ ಜನತಾ ದಳದ (RJD) ಮುಖ್ಯಸ್ಥರಿಗೆ ಜಾರ್ಖಂಡ್ ಹೈಕೋರ್ಟ್ ಕನಿಷ್ಠ ನಾಲ್ಕು ಪ್ರಕರಣಗಳಲ್ಲಿ ಜಾಮೀನು ನೀಡಿತ್ತು. ಎಲ್ಲಾ ಆದೇಶಗಳನ್ನು ಸಿಬಿಐ ಪ್ರಶ್ನಿಸಿದೆ.
ಲಾಲು ಅವರು ಪ್ರಕರಣಗಳಲ್ಲಿ ಅಪರಾಧಿಯಾಗಿದ್ದು, ಅವರ ಮೇಲ್ಮನವಿಗಳು ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿವೆ.
.