×
Ad

ಕದನ ವಿರಾಮ ಒಪ್ಪಂದ | ಗಾಝಾದಿಂದ ಸೈನ್ಯ ಹಿಂಪಡೆಯಲು ಸಿದ್ದತೆ ನಡೆಯುತ್ತಿದೆ : ಇಸ್ರೇಲ್ ಸೇನೆ ಅಧಿಕೃತ ಘೋಷಣೆ

Update: 2025-10-09 13:01 IST

ಸಾಂದರ್ಭಿಕ ಚಿತ್ರ | PC : NDTV 

ಟೆಲ್ ಅವೀವ್,ಅ. 9: ಇಸ್ರೇಲ್ ಮತ್ತು ಹಮಾಸ್ ಮೊದಲ ಹಂತದ ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಕೊಂಡ ಹಿನ್ನೆಲೆಯಲ್ಲಿ ಗಾಝಾ ಪ್ರದೇಶದಿಂದ ಸೈನ್ಯವನ್ನು ಹಿಂತೆಗೆದುಕೊಳ್ಳಲು ಸಿದ್ಧತೆಗಳು ನಡೆಯುತ್ತಿವೆ ಎಂದು ಇಸ್ರೇಲ್ ಸೇನೆ (ಐಡಿಎಫ್) ಅಧಿಕೃತವಾಗಿ ಘೋಷಿಸಿದೆ.

“ಒಪ್ಪಂದ ಜಾರಿಗೆ ಮುನ್ನ, ಐಡಿಎಫ್ ಕಾರ್ಯಾಚರಣೆಯ ಸಿದ್ಧತೆಗಳನ್ನು ಆರಂಭಿಸಿದೆ. ಈ ಪ್ರಕ್ರಿಯೆಯ ಭಾಗವಾಗಿ, ಶೀಘ್ರದಲ್ಲೇ ಅಗತ್ಯ ತಾಂತ್ರಿಕ ಸಿದ್ಧತೆಗಳು ಮತ್ತು ಯುದ್ಧದ ಶಿಷ್ಟಾಚಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ,” ಎಂದು ಸೇನೆ ಪ್ರಕಟಣೆಯಲ್ಲಿ ತಿಳಿಸಿದೆ.

ಹಮಾಸ್‌ ನಿಂದ ಒತ್ತೆಯಾಳುಗಳನ್ನು ಬಿಡುಗಡೆಗೊಳಿಸಲು ಮತ್ತು ಮಾನವೀಯ ಸಹಾಯ ವಿತರಣೆಗೆ ಅನುಕೂಲವಾಗುವ ಉದ್ದೇಶದಿಂದ ಈ ಒಪ್ಪಂದ ಮಹತ್ವದ್ದಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಳೆದ ಕೆಲವು ತಿಂಗಳಿಂದ ಗಾಝಾದಲ್ಲಿ ತೀವ್ರ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಈ ಕ್ರಮವು ಶಾಂತಿ ಸ್ಥಾಪನೆಗೆ ದಾರಿ ಮಾಡಿಕೊಡಬಹುದೆಂಬ ನಿರೀಕ್ಷೆ ವ್ಯಕ್ತವಾಗಿದೆ.

ಖತರ್ ಮತ್ತು ಈಜಿಪ್ಟ್ ಸೇರಿದಂತೆ ಅಂತಾರಾಷ್ಟ್ರೀಯ ಮಧ್ಯವರ್ತಿಗಳು ಈ ಒಪ್ಪಂದದ ಅನುಷ್ಠಾನ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News