NEET ಪರೀಕ್ಷಾ ವ್ಯವಸ್ಥೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರಕಾರ
Update: 2026-08-19 13:49 IST
Photo: PTI
ಹೊಸದಿಲ್ಲಿ: ನೀಟ್ ಪರೀಕ್ಷೆ ನಡೆಸಲು ಜಾರಿಗೆ ತಂದಿರುವ ವ್ಯವಸ್ಥೆಯು ಸಂಪೂರ್ಣವಾಗಿ ಸುರಕ್ಷಿತವಾಗಿದ್ದು, ಅದನ್ನು ಉಲ್ಲಂಘಿಸುವುದು ಕಷ್ಟಕರವಾಗಿದೆ ಎಂದು ಕೇಂದ್ರ ಸರಕಾರ ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಪ್ರಶ್ನೆಪತ್ರಿಕೆಗಳ ಭದ್ರತೆ ಮತ್ತು ನಿರ್ವಹಣೆ ಕುರಿತ ಕಳವಳಗಳಿಗೆ ಸಂಬಂಧಿಸಿದ ವಿಚಾರಣೆ ವೇಳೆ ಕೇಂದ್ರ ಸರಕಾರ ಈ ಹೇಳಿಕೆಯನ್ನು ನೀಡಿದೆ.
ನೀಟ್ ಪ್ರಶ್ನೆ ಪತ್ರಿಕೆಗಳನ್ನು ಸಾಗಿಸುವ ವಾಹನವು ಜಿಪಿಎಸ್ ಹೊಂದಿದೆ, ವಾಹನದ ಸಣ್ಣ ಚಲನವಲನ ಕೂಡ ಸೆರೆಯಾಗುತ್ತದೆ ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಪರೀಕ್ಷೆಗೆ ಪ್ರಶ್ನೆಗಳನ್ನು ಸಿದ್ಧಪಡಿಸುವ ಪ್ರಕ್ರಿಯೆಯಲ್ಲಿ ಹಲವಾರು ಮಾಡರೇಟರ್‌ಗಳು ಭಾಗಿಯಾಗುತ್ತಾರೆ. ಅಂತಿಮವಾಗಿ ಯಾವ ಪ್ರಶ್ನೆಗಳು ಪ್ರಶ್ನೆಪತ್ರಿಕೆಯ ಭಾಗವಾಗಲಿವೆ ಎಂಬುದು ಅವರಿಗೂ ತಿಳಿದಿರುವುದಿಲ್ಲ ಎಂದು ಸರಕಾರ ತಿಳಿಸಿದೆ.