×
Ad

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ

Update: 2024-06-12 11:39 IST

Photo: ANI

ಅಮರಾವತಿ : ತೆಲುಗು ದೇಶಂ ಪಾರ್ಟಿ (ಟಿಡಿಪಿ)ಯ ಮುಖ್ಯಸ್ಥ N. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ನಾಯ್ಡು ಅವರು 4ನೇ ಬಾರಿಗೆ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. 

ಟಿಡಿಪಿ ಮಿತ್ರ ಪಕ್ಷ ಜನಸೇನಾದ ಮುಖ್ಯಸ್ಥ, ನಟ ಪವನ್ ಕಲ್ಯಾಣ್ ಅವರೂ ಪ್ರಮಾಣ ವಚನ ಸ್ವೀಕರಿಸಿದರು.

ಅವರ ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಮೈತ್ರಿಕೂಟವು 175 ಸದಸ್ಯಬಲದ ಆಂಧ್ರಪ್ರದೇಶ ವಿಧಾನಸಭೆಯಲ್ಲಿ 164 ಸ್ಥಾನಗಳನ್ನು ಗಳಿಸುವ ಮೂಲಕ ಭರ್ಜರಿಯಾಗಿ ಅಧಿಕಾರಕ್ಕೆ ಮರಳಿದೆ. ರಾಜ್ಯದಲ್ಲಿ ತನ್ನ ಪ್ರಾಬಲ್ಯವನ್ನು ಮೆರೆದಿದ್ದು ಮಾತ್ರವಲ್ಲ, ಅವರ ಟಿಡಿಪಿಯು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟದಲ್ಲಿ ಎರಡನೇ ಅತ್ಯಂತ ದೊಡ್ಡ ಪಕ್ಷವಾಗುವುದರೊಂದಿಗೆ ನಾಯ್ಡು ರಾಷ್ಟ್ರೀಯ ಮಟ್ಟದಲ್ಲಿಯೂ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News