×
Ad

ಮತ್ತೊಮ್ಮೆ ಎನ್ ಡಿಎ ಸೇರುವ ಕುರಿತು ಚಂದ್ರಬಾಬು ನಾಯ್ದು ಪ್ರತಿಕ್ರಿಯಿಸಿದ್ದು ಹೀಗೆ…

Update: 2023-08-16 10:14 IST

ವಿಶಾಖಪಟ್ಟಣಂ: ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತೊಮ್ಮೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ ಡಿಎ) ಸೇರುವ ಬಗ್ಗೆ ಗುಸುಗುಸು ಕೇಳಿಬರುತ್ತಿದ್ದು, ಈ ಕುರಿತು ಪ್ರತಿಕ್ರಿಯಿಸಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷ ಚಂದ್ರಬಾಬು ನಾಯ್ಡು ಈ ಬಗ್ಗೆ ಸರಿಯಾದ ಸಮಯಕ್ಕೆ ಮಾತನಾಡುವುದಾಗಿ ಹೇಳಿದ್ದಾರೆ.

ಎನ್ ಡಿಎ ಸೇರುವ ಯೋಜನೆ ಕುರಿತು ಕೇಳಿದ ಪ್ರಶ್ನೆಗೆ, ಇದು ಸರಿಯಾದ ಸಮಯವಲ್ಲ ಎಂದು ನಾಯ್ಡು ಹೇಳಿದರು.

ಎನ್ ಡಿಎ ಸರಕಾರಕ್ಕೆ ಸೇರುವ ಬಗ್ಗೆ ಮಾತನಾಡಲು ಇದು ಸಮಯವಲ್ಲ, ನಾನು ಈ ಬಗ್ಗೆ ಸರಿಯಾದ ಸಮಯದಲ್ಲಿ ಮಾತನಾಡುತ್ತೇನೆ ಎಂದು ಅವರು ಎಎನ್ಐ ಜೊತೆ ಮಾತನಾಡುತ್ತಾ ನಾಯ್ದು ಹೇಳಿದರು.

ಮಂಗಳವಾರ ಸಂಜೆ ಪೋರ್ಟ್ ಸಿಟಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ವಿಷನ್-2047 ಡಾಕ್ಯುಮೆಂಟ್ ಅನ್ನು ಬಿಡುಗಡೆ ಮಾಡಿದ ನಂತರ ನಾಯ್ಡು ಅವರು ANI ಜೊತೆ ಮಾತನಾಡುತ್ತಿದ್ದರು.

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆಯನ್ನು ವಿರೋಧಿಸಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ಡಿಎ) ಸಂಸ್ಥಾಪಕರಲ್ಲಿ ಒಬ್ಬರಾದ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ (ಟಿಡಿಪಿ) ಎನ್ ಡಿಎ ತೊರೆದಿತ್ತು..

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News