×
Ad

NEET ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಮಗ ಆತ್ಮಹತ್ಯೆ ಮಾಡಿಕೊಂಡ ಮರುದಿನವೇ ತಂದೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

Update: 2023-08-14 12:19 IST

Photo: NDTV

ಚೆನ್ನೈ: ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ನಂತರ 19 ವರ್ಷದ ಮಗ ಆತ್ಮಹತ್ಯೆ ಮಾಡಿಕೊಂಡ ಒಂದು ದಿನದ ನಂತರ, ತರುಣನ ತಂದೆ ಕೂಡಾ ತಮಿಳುನಾಡಿನ ಚೆನ್ನೈನಲ್ಲಿರುವ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

2022 ರಲ್ಲಿ 12 ನೇ ತರಗತಿಯಲ್ಲಿ 427 ಅಂಕಗಳೊಂದಿಗೆ ಪಾಸಾಗಿದ್ದ ಜಗದೀಶ್ವರನ್ ಎರಡು ಪ್ರಯತ್ನಗಳಲ್ಲಿ ನೀಟ್ ಪ್ರವೇಶ ಪರೀಕ್ಷೆಯನ್ನು ಪಾಸಾಗಲು ಸಾಧ್ಯವಾಗಲಿಲ್ಲ. ಜಗದೀಶ್ವರನ್ ಶನಿವಾರ ತಂದೆ ಕರೆ ಮಾಡಿದರೂ ಸ್ಪಂದಿಸಿರಲಿಲ್ಲ. ನಂತರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮರುದಿನ ಬೆಳಿಗ್ಗೆ ಜಗದೀಶ್ವರನ್ ತಂದೆ ಸೆಲ್ವಶೇಖರ್ ಶವವಾಗಿ ಪತ್ತೆಯಾಗಿದ್ದರು. ಮಗನ ಸಾವಿನ ದುಃಖ ತಾಳಲಾರದೆ ಸೆಲ್ವಶೇಖರ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ .ಸ್ಟಾಲಿನ್ ಅವರು ಸಾವಿಗೆ ಸಂತಾಪ ಸೂಚಿಸಿದ್ದಾರೆ ಮತ್ತು "ಆತ್ಮಹತ್ಯೆಯ ಆಲೋಚನೆಗಳನ್ನು ಮಾಡಬೇಡಿ. ಆತ್ಮ ವಿಶ್ವಾಸವನ್ನು ಹೊಂದಲು ಹಾಗೂ ಬದುಕಲು ಕಲಿಯಿರಿ " ಎಂದು ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News