×
Ad

ಛತ್ತೀಸ್‌ಗಡ: ಮೋದಿ ರ‍್ಯಾಲಿಗೆ ಜನರನ್ನು ಕರೆತರುತ್ತಿದ್ದ ಬಸ್ ಅವಘಡ: ಮೂವರು ಸಾವು

Update: 2023-07-07 22:38 IST

Photo: Twitter/@ANI

ಬಿಲಾಸಪುರ: ಛತ್ತೀಸ್‌ಗಡದ ರಾಜಧಾನಿ ರಾಯ್ಪುರದಲ್ಲಿ ಶುಕ್ರವಾರ ನಡೆದ ಪ್ರಧಾನಿ ಮೋದಿಯವರ ಸಾರ್ವಜನಿಕರ ರ‍್ಯಾಲಿಗೆ ಜನರನ್ನು ಕರೆತರುತ್ತಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.

ಈ ನತದೃಷ್ಟ ಬಸ್ ಬಿಲಾಸಪುರ ಜಿಲ್ಲೆಯ ಅಂಬಿಕಾಪುರದಿಂದ ರಾಯ್ಪುರಕ್ಕೆ ಪ್ರಯಾಣಿಸುತ್ತಿದ್ದಾಗ, ಬೆಲ್ಟಾರಾ ಗ್ರಾಮದಲ್ಲಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧೀಕ್ಷಕ ಸಂತೋಷ್ ಸಿಂಗ್ ತಿಳಿಸಿದ್ದಾರೆ.

ಭಾರೀ ಮಳೆಯಿದ್ದ ಕಾರಣ ರಸ್ತೆ ಬದಿ ನಿಲ್ಲಿಸಲಾಗಿದ್ದ ಟ್ರಕ್, ಬಸ್ ಚಾಲಕನಿಗೆ ಸ್ಪಷ್ಟವಾಗಿ ಕಾಣಿಸುತ್ತಿರಲಿಲ್ಲ. ಇದರಿಂದಾಗಿ ಬಸ್, ಟ್ರಕ್ ನ ಹಿಂಬದಿಗೆ ಡಿಕ್ಕಿ ಹೊಡೆದಿದೆಯೆಂದು ಅವರು ಹೇಳಿದ್ದಾರೆ.

ಗಾಯಾಳುಗಳಲ್ಲಿ ಮೂವರ ಪರಿಸ್ಥಿತಿ ಗಂಭೀರವಾಗಿದೆಯೆಂದು ಅವರು ಹೇಳಿದ್ದಾರೆ.

ದುರಂತದಲ್ಲಿ ಸಾವಿಗೀಡಾದವರ ಕುಟುಂಬಗಳಿಗೆ ರಾಜ್ಯ ಸರಕಾರ ತಲಾ ನಾಲ್ಕು ಲಕ್ಷ ರೂ. ಹಾಗೂ ಪ್ರತಿಪಕ್ಷ ಬಿಜೆಪಿ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News