×
Ad

ಛತ್ತೀಸ್ ಗಢ: ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ 31 ಮಂದಿ ನಕ್ಸಲರ ಹತ್ಯೆ

Update: 2025-02-09 11:36 IST

ಭದ್ರತಾ ಪಡೆಗಳ ಕಾರ್ಯಾಚರಣೆ (File Photo: PTI)

ಬಿಜಾಪುರ್: ಬಿಜಾಪುರ್ ಜಿಲ್ಲೆಯ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ರವಿವಾರ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ 31 ಮಂದಿ ನಕ್ಸಲರು ಹತ್ಯೆಗೀಡಾಗಿದ್ದು, ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಗಳೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಗುಂಡಿನ ಚಕಮಕಿಯಲ್ಲಿ ಇನ್ನಿಬ್ಬರು ಭದ್ರತಾ ಸಿಬ್ಬಂದಿಗಳೂ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ವಿವಿಧ ಭದ್ರತಾ ಪಡೆಗಳ ಜಂಟಿ ತಂಡದ ಸಿಬ್ಬಂದಿಗಳು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ತೆರಳಿದಾಗ, ಇಂದು ಬೆಳಗ್ಗೆ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿನ ಕಾಡಿನಲ್ಲಿ ಈ ಗುಂಡಿನ ಕಾಳಗ ನಡೆಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆಯ ಜಿಲ್ಲಾ ಮೀಸಲು ಪಡೆಯ ಓರ್ವ ಸಿಬ್ಬಂದಿ ಹಾಗೂ ವಿಶೇಷ ಕಾರ್ಯಾಚರಣೆ ಪಡೆಯ ಓರ್ವ ಸಿಬ್ವಂದಿ ಸೇರಿದಂತೆ ಇಬ್ಬರು ಭದ್ರತಾ ಸಿಬ್ಬಂದಿಗಳೂ ಈ ಗುಂಡಿನ ಕಾಳಗದಲ್ಲಿ ಮೃತಪಟ್ಟಿದ್ದಾರೆ. ಇನ್ನಿಬ್ಬರು ಸಿಬ್ಬಂದಿಗಳಿಗೆ ಗಾಯಗಳಾಗಿವೆ ಎಂದು ಅವರು ತಿಳಿಸಿದ್ದಾರೆ.

ಮೃತ ಭದ್ರತಾ ಪಡೆಗಳ ಸಿಬ್ಬಂದಿಗಳ ಶವಗಳನ್ನು ವಶಪಡಿಸಿಕೊಳ್ಳು2ವ ಹಾಗೂ ಗಾಯಗೊಂಡಿರುವ ಯೋಧರನ್ನು ತೆರವುಗೊಳಿಸುವ ಪ್ರಯತ್ನಗಳು ಪ್ರಗತಿಯಲ್ಲಿವೆ ಎಂದೂ ಅವರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News