×
Ad

ಚತ್ತೀಸ್‌ಗಢ: ಗುಂಡಿನ ಕಾಳಗದಲ್ಲಿ ಇಬ್ಬರು ನಕ್ಸಲೀಯರು ಸಾವು

Update: 2023-10-21 20:38 IST

Photo- PTI

ಕಂಕೇರ್: ಚತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ನಕ್ಸಲೀಯರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಶನಿವಾರ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ನಕ್ಸಲೀಯರು ಹತರಾಗಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. 

ರಾಜ್ಯ ಪೊಲೀಸ್ ಪಡೆಯ ಘಟಕ ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್ (ಡಿಆರ್‌ಜಿ)ನ ತಂಡ ಕೊಯಾಲಿಬೇಡ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಬೆಳಗ್ಗೆ ಸುಮಾರು 8 ಗಂಟೆಗೆ ಕಾರ್ಯಾಚರಣೆ ನಡೆಸಿದ ಸಂದರ್ಭ ಗುಂಡಿನ ಕಾಳಗ ನಡೆಯಿತು ಎಂದು ಐಜಿಪಿ (ಬಸ್ತಾರ್ ರೇಂಜ್)ನ ಸುಂದರ್ ರಾಜ್ ಪಿ. ತಿಳಿಸಿದ್ದಾರೆ. 

ಗುಂಡಿನ ಕಾಳಗ ನಿಂತ ಮೇಲೆ ಘಟನಾ ಸ್ಥಳದಲ್ಲಿ ಇಬ್ಬರು ಪುರುಷ ನಕ್ಸಲೀಯರ ಮೃತದೇಹ, ಇನ್ಸಾಸ್ ರೈಫಲ್, ಒಂದು 12 ಬೋರ್ ರೈಫಲ್, ಇತರ ಶಸ್ತ್ರಾಸ್ತ್ರ ಹಾಗೂ ಸ್ಫೋಟಕಗಳು ಪತ್ತೆಯಾಗಿವೆ ಎಂದು ಅವರು ಹೇಳಿದ್ದಾರೆ. 

ಮೃತಪಟ್ಟ ನಕ್ಸಲೀಯರ ಗುರುತು ಇನ್ನಷ್ಟೇ ಪತ್ತೆ ಹಚ್ಚಬೇಕಾಗಿದೆ. ಗುಂಡಿನ ಕಾಳಗ ನಡೆದ ಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ  ಮುಂದುವರಿದಿದೆ ಎಂದು ಅವರು ತಿಳಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News