×
Ad

“ಮುಖ್ಯಮಂತ್ರಿಗೆ ಹಿಂದಿ, ಇಂಗ್ಲಿಷ್ ಮಾತನಾಡಲು ಬರುವುದಿಲ್ಲ”: ಅಮಿತ್ ಶಾ ಹಿಂದಿ ಪರ ಹೇಳಿಕೆ ಖಂಡಿಸಿದ್ದ ಸ್ಟಾಲಿನ್ ಗೆ ಅಣ್ಣಾಮಲೈ ತಿರುಗೇಟು

Update: 2023-08-06 19:05 IST

 ಎಂ.ಕೆ. ಸ್ಟಾಲಿನ್‌,ಕೆ. ಅಣ್ಣಾಮಲೈ | Photo: PTI 

ಚೆನ್ನೈ: ಅಮಿತ್ ಶಾ ಅವರ ಹಿಂದಿ ಪರ ಹೇಳಿಕೆಯನ್ನು ಖಂಡಿಸಿದ್ದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌, “ನಮ್ಮನ್ನು ಹಿಂದಿಯ ಗುಲಾಮರಾಗಿಸಲು ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಸಿಎಂ ಸ್ಟಾಲಿನ್‌ ಅವರಿಗೆ ಹಿಂದಿ ಅಥವಾ ಇಂಗ್ಲಿಷ್ ಮಾತನಾಡಲು ಬರುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಸ್ಟಾಲಿನ್‌ ಅವರಿಗೆ ಹಿಂದಿ ಅಥವಾ ಇಂಗ್ಲಿಷ್ ಮಾತನಾಡಲು ಬರುವುದಿಲ್ಲ. ಹಾಗಾಗಿ ಗೃಹ ಸಚಿವರು ಏನು ಹೇಳಿದ್ದಾರೆಂದು ಅವರಿಗೆ ಅರ್ಥವಾಗಿಲ್ಲ ಎಂದು ಅಣ್ಣಾಮಲೈ ವ್ಯಂಗ್ಯವಾಡಿದ್ದಾರೆ..

ಸ್ಟಾಲಿನ್ ಮತ್ತು ಉದಯನಿಧಿ ಅವರಿಗೆ ಜನರೊಂದಿಗೆ ಮಾತನಾಡಲು ಬೇರೆ ಯಾವುದೇ ವಿಷಯವಿಲ್ಲ ಎಂದು ಅಣ್ಣಾಮಲೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News