ಮುಂದಿನ ಸಿಜೆಐ ಆಗಿ ನ್ಯಾ.ಸೂರ್ಯಕಾಂತ್ ಅವರನ್ನು ನೇಮಿಸುವಂತೆ ಶಿಫಾರಸು ಮಾಡಿದ ಸಿಜೆಐ ಬಿ.ಆರ್. ಗವಾಯಿ
Update: 2025-10-27 11:44 IST
ನ್ಯಾಯಮೂರ್ತಿ ಸೂರ್ಯಕಾಂತ್ | pc: thehindu
ಹೊಸದಿಲ್ಲಿ : ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಮುಂದಿನ ಸಿಜೆಐ ಆಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೆಸರನ್ನು ಕೇಂದ್ರ ಕಾನೂನು ಸಚಿವಾಲಯಕ್ಕೆ ಶಿಫಾರಸು ಮಾಡಿದ್ದಾರೆ.
ನವೆಂಬರ್ 24ರಂದು ಮುಖ್ಯ ನ್ಯಾಯಮೂರ್ತಿ ಗವಾಯಿ ಅವರು ನಿವೃತ್ತಿಯಾಗಲಿದ್ದಾರೆ.
ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸಿಜೆಐ ಗವಾಯಿ ಅವರ ನಂತರ ಎರಡನೇ ಅತ್ಯಂತ ಹಿರಿಯ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದಾರೆ.