×
Ad

ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಛನ್ನುಲಾಲ್ ಮಿಶ್ರಾ ನಿಧನ

Update: 2025-10-02 10:40 IST

Photo|ndtv

ಹೊಸ ದಿಲ್ಲಿ: ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕ ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಛನ್ನುಲಾಲ್ ಮಿಶ್ರಾ ಅವರು ಉತ್ತರ ಪ್ರದೇಶದ ಮಿರ್ಝಾಪುರದಲ್ಲಿರುವ ತಮ್ಮ ಪುತ್ರಿಯ ನಿವಾಸದಲ್ಲಿ ಗುರುವಾರ ನಿಧನರಾಗಿದ್ದಾರೆ. 

ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಛನ್ನುಲಾಲ್ ಮಿಶ್ರಾ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಮುಂಜಾನೆ  4 ಗಂಟೆಗೆ ಅವರು ನಿಧನರಾಗಿದ್ದಾರೆ ಎಂದು ಅವರು ಪುತ್ರಿ ನಮ್ರತಾ ಮಿಶ್ರಾ ತಿಳಿಸಿದ್ದಾರೆ.

ಛನ್ನುಲಾಲ್ ಮಿಶ್ರಾರ ಅಂತ್ಯಕ್ರಿಯೆಯನ್ನು ಗುರುವಾರ ಸಂಜೆ 5 ಗಂಟೆಗೆ ವಾರಾಣಸಿಯಲ್ಲಿ ನೆರವೇರಿಸಲಾಗುತ್ತದೆ. ಅವರು ತಮ್ಮ ಪುತ್ರ, ತಬಲಾ ವಾದಕ ರಾಮಕುಮಾರ್ ಮಿಶ್ರಾ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಛನ್ನುಲಾಲ್ ಮಿಶ್ರಾರ ನಿಧನಕ್ಕೆ ಪ್ರಧಾನಿ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತಿತರರು  ಸಂತಾಪ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News