×
Ad

ಉತ್ತರಾಖಂಡದಲ್ಲಿ ಮೇಘಸ್ಫೋಟದಿಂದ ಪ್ರವಾಹ ಸೃಷ್ಟಿ : ಕೊಚ್ಚಿ ಹೋದ ಮನೆಗಳು, ಇಬ್ಬರು ನಾಪತ್ತೆ

Update: 2025-09-16 10:32 IST

Photo: ANI

ಡೆಹ್ರಾಡೂನ್ : ಉತ್ತರಾಖಂಡದ : ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟದ ಬಳಿಕ ಉದ್ಭವಿಸಿದ ಪ್ರವಾಹದಲ್ಲಿ ಹಲವು ಮನೆಗಳು, ವಾಹನಗಳು ಮತ್ತು ಅಂಗಡಿಗಳು ಕೊಚ್ಚಿ ಹೋಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ.

ತಡರಾತ್ರಿ ಮೇಘಸ್ಫೋಟ ಸಂಭವಿಸಿದ್ದು ಸಂತ್ರಸ್ತರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ನಾಪತ್ತೆಯಾದ ಇಬ್ಬರು ವ್ಯಕ್ತಿಗಳನ್ನು ಪತ್ತೆಹಚ್ಚಲು ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ.

ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಸವಿನ್ ಬನ್ಸಾಲ್, ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (SDM) ಕುಂಕುಮ್ ಜೋಶಿ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಪಿಡಬ್ಲ್ಯೂಡಿ ಮತ್ತು ಇತರ ಅಧಿಕಾರಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಭಾರೀ ಮಳೆ ಮತ್ತು ಮೇಘಸ್ಫೋಟದ ಹಿನ್ನೆಲೆಯಲ್ಲಿ ಡೆಹ್ರಾಡೂನ್‌ನಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News