×
Ad

ಛತ್ತೀಸ್ ಗಢ | ಭದ್ರತಾ ಪಡೆಗಳು - ನಕ್ಸಲರ ನಡುವಿನ ಗುಂಡಿನ ಚಕಮಕಿ; ಓರ್ವ ಕೋಬ್ರಾ ಕಮಾಂಡೊ, ನಕ್ಸಲ್ ಮೃತ್ಯು

Update: 2025-05-22 19:35 IST

Photo: PTI

ರಾಯ್ಪುರ: ಛತ್ತೀಸ್ ಗಢದ ಬಿಜಾಪುರ್ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾವೋವಾದಿ ನಿಗ್ರಹ ಕಾರ್ಯಾಚರಣೆಯಲ್ಲಿ ಗುರುವಾರ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಓರ್ವ ಕೋಬ್ರಾ ಕಮಾಂಡೊ, ಓರ್ವ ನಕ್ಸಲ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಕೋಬ್ರಾ ಘಟಕದ 210ನೇ ತುಕಡಿ ಹಾಗೂ ಛತ್ತೀಸ್ ಗಢ ಪೊಲೀಸ್ ಇಲಾಖೆಯ ಡಿಆರ್ಜಿ ಮತ್ತು ಎಸ್ಟಿಎಫ್ ಪಡೆಗಳ ನೇತೃತ್ವದಲ್ಲಿ ಬಿಜಾಪುರ್ ಜಿಲ್ಲೆಯ ಉಸೂರ್ ಪೊಲೀಸ್ ಠಾಣೆ ವ್ಯಾಪ್ತಿಯ ತುಮ್ರೇಲ್ ಪ್ರದೇಶದಲ್ಲಿ ನಡೆಯುತ್ತಿರುವ ಮಾವೋವಾದಿಗಳ ನಿಗ್ರಹ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದ್ದಾರೆ.

ಈ ಕಾರ್ಯಾಚರಣೆಯ ವೇಳೆ ಓರ್ವ ಕೋಬ್ರಾ ಕಮಾಂಡೊ ಹುತಾತ್ಮರಾಗಿದ್ದು, ಮತ್ತೋರ್ವ ಯೋಧ ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಈ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲನನ್ನು ಹತ್ಯೆಗೈಯ್ಯಲಾಗಿದ್ದು, ಆತನಿಂದ ಆಯುಧವೊಂದನ್ನು ವಶಪಡಿಸಿಕೊಳ್ಳಲಾಗಿದೆ ಎಂದೂ ಅವರು ಹೇಳಿದ್ದಾರೆ. ಇದಕ್ಕೂ ಮುನ್ನ, ಮಾವೋವಾದಿ ನಿಗ್ರಹ ಕಾರ್ಯಾಚರಣೆ ನಡೆಯುತ್ತಿರುವ ಸ್ಥಳವನ್ನು ಸುಕ್ಮಾ ಎಂದು ಅಧಿಕಾರಿಗಳು ತಪ್ಪಾಗಿ ಮಾಹಿತಿ ನೀಡಿದ್ದರು.

ಗಾಯಗೊಂಡಿರುವ ಯೋಧನನ್ನು ತೆರವುಗೊಳಿಸಲು ಒಂದು ಭಾರತೀಯ ವಾಯು ಪಡೆಯ ಹೆಲಿಕಾಪ್ಟರ್ ಅನ್ನು ಸೇವೆಗಾಗಿ ರವಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.

The Commando Batallion for Resolute Action ಪಡೆಯು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ವಿಶೇಷ ಅರಣ್ಯ ಕಾರ್ಯಾಚರಣಾ ಘಟಕವಾಗಿದ್ದು, ಈ ಪಡೆಯು ಮಾವೋವಾದಿ ನಿಗ್ರಹ ಕಾರ್ಯಾಚರಣೆಯಲ್ಲಿ ಮುಂಚೂಣಿಯಲ್ಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News