×
Ad

ತಮಿಳುನಾಡು ಡಿಐಜಿ ವಿಜಯಕುಮಾರ್ ಆತ್ಮಹತ್ಯೆ

Update: 2023-07-07 11:44 IST

ವಿಜಯಕುಮಾರ್ (Photo : newindianexpress.com)

ಕೊಯಂಬತ್ತೂರು: ಆಘಾತಕಾರಿ ಘಟನೆಯೊಂದರಲ್ಲಿ ತಮಿಳುನಾಡಿನ ಪೊಲೀಸ್ ಮಹಾ ನಿರೀಕ್ಷಕ (ಕೊಯಂಬತ್ತೂರು ವಲಯ) ಹಾಗೂ ಹಿರಿಯ ಐಪಿಎಸ್ ಅಧಿಕಾರಿ ವಿಜಯಕುಮಾರ್ ಅವರು ತಮ್ಮ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಆತ್ಮಹತ್ಯೆಗೆ ಕಾರಣವೇನೆಂದು ಈವರೆಗೆ ತಿಳಿದು ಬಂದಿಲ್ಲ.

ರೇಸ್‌ಕೋರ್ಸ್ ರಸ್ತೆಯಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಇಂದು ಬೆಳಗ್ಗೆ 6.15ರ ಸುಮಾರಿಗೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

45 ವರ್ಷದ ವಿಜಯಕುಮಾರ್ ಕುಟುಂಬದ ಸದಸ್ಯರೊಂದಿಗೆ ತಮ್ಮ ಅಧಿಕೃತ ನಿವಾಸದಲ್ಲಿ ವಾಸಿಸುತ್ತಿದ್ದರು. ಸುದ್ದಿ ತಿಳಿಯುತ್ತಿದ್ದಂತೆಯೇ ಹಿರಿಯ ಪೊಲೀಸ್ ಅಧಿಕಾರಿಗಳು ಅವರ ನಿವಾಸದ ಬಳಿ ಮೊಕ್ಕಾಂ ಹೂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News