×
Ad

ಕಂಗನಾ ವಿರುದ್ಧ ಅವಹೇಳನಾಕಾರಿ ಹೇಳಿಕೆ ಆರೋಪ ಬೆನ್ನಲ್ಲೇ ಅಭ್ಯರ್ಥಿಗಳ ಪಟ್ಟಿಯಿಂದ ಸುಪ್ರಿಯಾ ಶ್ರೀನಾಠೆ ಹೆಸರು ಕೈಬಿಟ್ಟ ಕಾಂಗ್ರೆಸ್

Update: 2024-03-28 12:14 IST

 ಸುಪ್ರಿಯಾ ಶ್ರೀನಾಠೆ , ಕಂಗನಾ ರಣಾವತ್ | Photo: X

ಹೊಸದಿಲ್ಲಿ: ನಟಿ, ರಾಜಕಾರಣಿ ಕಂಗನಾ ರಣಾವತ್ ವಿರುದ್ಧ ವಿವಾದಾತ್ಮಕ ಪೋಸ್ಟ್ ಮಾಡಿದ್ದಾರೆನ್ನಲಾದ ಕಾಂಗ್ರೆಸ್ ಪಕ್ಷದ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥೆ ಸುಪ್ರಿಯಾ ಶ್ರೀನಾಠೆಯವರ ಹೆಸರನ್ನು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯಿಂದ ಕೈಬಿಟ್ಟಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಮಹಾರಾಜ್ ಗಂಜ್ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದ ಶ್ರೀನಾಠೆ, ಮುಂಬರುವ ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಬಿಡುಗಡೆ ಮಾಡಿರುವ ಎಂಟನೆ ಪಟ್ಟಿಯಲ್ಲಿ ಯಾವ ಕ್ಷೇತ್ರದಿಂದಲೂ ಸ್ಥಾನ ಪಡೆದಿಲ್ಲ.

ಈ ಬಾರಿ ಮಹಾರಾಜ್ ಗಂಜ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷವು ವಿರೇಂದ್ರ ಚೌಧರಿಯನ್ನು ಕಣಕ್ಕಿಳಿಸಿದೆ.

ಭಾರತೀಯ ಜನತಾ ಪಕ್ಷದಿಂದ ಮಂಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿರುವ ನಟಿ ಕಂಗನಾ ರಣಾವತ್ ವಿರುದ್ಧ ಮಾಡಿದ್ದ ಸಾಮಾಜಿಕ ಮಾಧ್ಯಮ ಪೋಸ್ಟ್ ನಿಂದ ಸುಪ್ರಿಯಾ ಶ್ರೀನಾಠೆ ವಿವಾದಕ್ಕೆ ಗುರಿಯಾಗಿದ್ದರು. ಕಾಂಗ್ರೆಸ್ ಪಕ್ಷದ ವಕ್ತಾರೆಯಾದ ಅವರು ಕಂಗನಾ ರಣಾವತ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ನಂತರ ಈ ಕುರಿತು ಸ್ಪಷ್ಟೀಕರಣ ನೀಡಿದ್ದ ಸುಪ್ರಿಯಾ ಶ್ರೀನಾಠೆ, ನನ್ನ ಖಾತೆಗೆ ಬೇರೆಯವರು ಕನ್ನ ಹಾಕಿ ಆ ಪೋಸ್ಟ್ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಹೀಗಿದ್ದೂ ಅವರು ಮಹಾರಾಜ್ ಗಂಜ್ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಟಿಕೆಟ್ ವಂಚಿತರಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News