Gen Z ಪ್ರತಿಭಟನೆಯ ವೇಳೆ ಪೆಲೆಟ್‌ ಗನ್‌ ಬಳಕೆ | ರಾಹುಲ್ ಗಾಂಧಿ ಧರಣಿಗೆ ಮಣಿದ ದಿಲ್ಲಿ ಪೊಲೀಸರು; FIR ದಾಖಲು

Update: 2026-08-21 19:31 IST

 ರಾಹುಲ್ ಗಾಂಧಿ | Photo Credit : PTI 

ಹೊಸದಿಲ್ಲಿ: ಜುಲೈ 20ರಂದು ದಿಲ್ಲಿಯಲ್ಲಿ CJP ನೇತೃತ್ವದಲ್ಲಿ ನಡೆದ Gen Z ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ ನಿಂದ ಗಾಯಗೊಂಡಿದ್ದ 19 ವರ್ಷದ ಸಾಹಿಲ್ ಲೋಚಬ್ ಅವರ ದೂರಿನ ಆಧಾರದಲ್ಲಿ ದಿಲ್ಲಿ ಪೊಲೀಸರು ಶುಕ್ರವಾರ FIR ದಾಖಲಿಸಿದ್ದಾರೆ.

ಪ್ರತಿಭಟನೆಯ ವೇಳೆ ಪೆಲೆಟ್ ಗನ್ ಬಳಸಿದ ಆರೋಪದ ಕುರಿತು FIR ದಾಖಲಿಸುವಂತೆ ಒತ್ತಾಯಿಸಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಸಂಸತ್ ರಸ್ತೆ ಪೊಲೀಸ್ ಠಾಣೆಯ ಹೊರಗೆ ಧರಣಿ ನಡೆಸಿದ ಕೆಲವೇ ಗಂಟೆಗಳ ಬಳಿಕ FIR ದಾಖಲಾಗಿದೆ. ಈ ಹಂತದಲ್ಲಿ ಯಾರನ್ನೂ ಆರೋಪಿಗಳೆಂದು ಹೆಸರಿಸಲಾಗಿಲ್ಲ.

ಲೋಚಬ್ ಅವರೊಂದಿಗೆ ಗಾಂಧಿ ಮೊದಲು ಮಂದಿರ್ ಮಾರ್ಗ ಪೊಲೀಸ್ ಠಾಣೆಗೆ ತೆರಳಿ FIR ದಾಖಲಿಸುವಂತೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಅವರು ಸಂಸತ್ ರಸ್ತೆ ಪೊಲೀಸ್ ಠಾಣೆಗೆ ತೆರಳಿ ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತ (DCP) ಸಚಿನ್ ಶರ್ಮಾ ಅವರನ್ನು ಭೇಟಿಯಾದರು.

ಚರ್ಚೆಯಲ್ಲಿ ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಲೋಚಬ್ ಅವರೊಂದಿಗೆ ಗಾಂಧಿ DCP ಕಚೇರಿ ಇರುವ ಪೊಲೀಸ್ ಠಾಣೆಯಲ್ಲೇ ಧರಣಿ ಕುಳಿತರು. ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ, ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸೇರಿದಂತೆ ಇತರ ಹಿರಿಯ ನಾಯಕರು ಧರಣಿಯಲ್ಲಿ ಪಾಲ್ಗೊಂಡರು.

ನಂತರ ಲೋಚಬ್ ಅವರ ದೂರಿನ ಆಧಾರದಲ್ಲಿ ಪೊಲೀಸರು FIR ದಾಖಲಿಸಿದ್ದು, ಪ್ರಕರಣದಲ್ಲಿ ಈವರೆಗೆ ಯಾರನ್ನೂ ಆರೋಪಿಗಳೆಂದು ಹೆಸರಿಸಿಲ್ಲ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News