Maharashtra ಸ್ಥಳೀಯ ಸಂಸ್ಥೆಗಳ ಚುನಾವಣೆ: ಮತ ಎಣಿಕೆ ಪ್ರಕ್ರಿಯೆ ಆರಂಭ
Update: 2026-01-16 10:12 IST
Pc: indiatoday
ಮುಂಬೈ: ಬಿಎಂಸಿ ಸೇರಿದಂತೆ ಮಹಾರಾಷ್ಟ್ರದ 29 ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಕೆಲವೇ ಗಂಟೆಗಳಲ್ಲಿ ಬೃಹನ್ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ)ಯ ಅಧಿಕಾರ ಯಾರ ಪಾಲಾಗಲಿದೆ ಎಂಬ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ.
ಜನವರಿ 15ರಂದು ಮಹಾರಾಷ್ಟ್ರದಾದ್ಯಂತ 29 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿತ್ತು. ಚುನಾವಣೋತ್ತರ ಸಮೀಕ್ಷೆಗಳು ಮುಂಬೈನಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಗೆಲುವು ಸಾಧಿಸುವ ಮುನ್ಸೂಚನೆ ನೀಡಿವೆ.
ಬೃಹನ್ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ)ಯ 12 ವಾರ್ಡ್‌ಗಳಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ ಆರಂಭಿಕ ಮುನ್ನಡೆ ಸಾಧಿಸಿದೆ.