×
Ad

ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,395ಕ್ಕೆ ಏರಿಕೆ : ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವಾಲಯ

Update: 2025-06-01 11:37 IST

ಹೊಸದಿಲ್ಲಿ : ಭಾರತದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆ 3,395 ಏರಿಕೆಯಾಗಿದೆ. ಕೇರಳ ರಾಜ್ಯವೊಂದರಲ್ಲೇ 1,336 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಮಹಾರಾಷ್ಟ್ರ, ದಿಲ್ಲಿ ನಂತರದ ಸ್ಥಾನದಲ್ಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಭಾರತದಲ್ಲಿ ಶುಕ್ರವಾರ ಮತ್ತು ಶನಿವಾರದ ಮಧ್ಯೆ 685 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ ಮತ್ತು ಕೋವಿಡ್ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದಾರೆ. ಮೃತರು ದಿಲ್ಲಿ, ಕೇರಳ, ಕರ್ನಾಟಕ ಮತ್ತು ಉತ್ತರ ಪ್ರದೇಶಕ್ಕೆ ಸೇರಿದವರಾಗಿದ್ದಾರೆ.

ಪ್ರಸ್ತುತ ಕೇರಳದಲ್ಲಿ 1,336, ಮಹಾರಾಷ್ಟ್ರದಲ್ಲಿ 467, ದಿಲ್ಲಿಯಲ್ಲಿ 375, ಗುಜರಾತ್‌ನಲ್ಲಿ 265, ಕರ್ನಾಟಕದಲ್ಲಿ 234, ಪಶ್ಚಿಮ ಬಂಗಾಳದಲ್ಲಿ 205, ತಮಿಳುನಾಡಿನಲ್ಲಿ 185 ಮತ್ತು ಉತ್ತರ ಪ್ರದೇಶದಲ್ಲಿ 117 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News