ಪಾಕ್‌ನಿಂದ ದಾಳಿ ಯತ್ನದ ಬೆನ್ನಲ್ಲೇ ಮೂರು ಸೇನೆಗಳ ಮುಖ್ಯಸ್ಥರ ಜೊತೆ ರಾಜನಾಥ್ ಸಿಂಗ್ ಮಾತುಕತೆ
Update: 2025-05-09 10:35 IST
Photo | NDTV
ಹೊಸದಿಲ್ಲಿ: ಭಾರತದ ಸೇನಾ ನೆಲೆಗಳು ಮತ್ತು ಇತರ ನಗರಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಕ್ಷಿಪಣಿ ಮತ್ತು ಡ್ರೋನ್ ದಾಳಿಯ ವಿಫಲ ಯತ್ನ ನಡೆಸಿರುವ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೂರು ಸೇನೆಗಳ ಮುಖ್ಯಸ್ಥರ ಜೊತೆ ಸಭೆ ನಡೆಸಿದ್ದಾರೆ.
ಶುಕ್ರವಾರ ಬೆಳಿಗ್ಗೆ ದಿಲ್ಲಿಯಲ್ಲಿ ನಡೆದ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಜನರಲ್ ಅನಿಲ್ ಚೌಹಾಣ್ ಮತ್ತು ಮೂರು ಸೇನಾ ಮುಖ್ಯಸ್ಥರು ಭಾಗವಹಿಸಿದ್ದರು. ಆಪರೇಷನ್ ಸಿಂಧೂರ ಬಳಿಕ ಭದ್ರತಾ ಪರಿಸ್ಥಿತಿಯನ್ನು ಅವಲೋಕಿಸಲು ಸಭೆ ನಡೆಸಲಾಗಿದೆ.
ಗುರುವಾರ ರಾತ್ರಿ 8:30ರ ಸುಮಾರಿಗೆ ರಾಜಸ್ಥಾನ ಮತ್ತು ಪಂಜಾಬ್‌ನ ಕೆಲ ನಗರಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ವಾಯುದಾಳಿಗೆ ಪ್ರಯತ್ನಿಸಿದೆ. ಆದರೆ ಭಾರತೀಯ ಸೇನೆ ಈ ಪ್ರಯತ್ನವನ್ನು ವಿಫಲಗೊಳಿಸಿತು.