ಈಡಿಯಿಂದ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ
Update: 2024-03-21 21:19 IST
Photo: PTI
ಹೊಸದಿಲ್ಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಈಡಿ)ವು ಗುರುವಾರ ರಾತ್ರಿ ಬಂಧಿಸಿದೆ.
ಅರವಿಂದ್ ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ (ಈಡಿ)ವು ಅವರ ನಿವಾಸಕ್ಕೆ ತೆರಳಿ ಶೋಧ ಕಾರ್ಯ ನಡೆಸಿತು. ಕೇಜ್ರಿವಾಲ್ ಅವರು ಈಗ ತುರ್ತು ವಿಚಾರಣೆಗಾಗಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋದರು. ಆದರೆ ಸುಪ್ರೀಂ ವಿಚಾರಣೆಯನ್ನು ನಾಳೆಗೆ ಮುಂದೂಡಿತು ಎಂದು ತಿಳಿದು ಬಂದಿದೆ.