ಕೇಜ್ರಿವಾಲ್‌ಗೆ ಎಪ್ರಿಲ್ 15ರ ತನಕ ನ್ಯಾಯಾಂಗ ಬಂಧನ ವಿಧಿಸಿದ ದಿಲ್ಲಿ ನ್ಯಾಯಾಲಯ
Update: 2024-04-01 11:58 IST
Photo: PTI
ಹೊಸದಿಲ್ಲಿ: ದಿಲ್ಲಿ ಮದ್ಯ ನೀತಿ ಪ್ರಕರಣದಲ್ಲಿ ಈಡಿಯಿಂದ ಬಂಧಿತರಾಗಿರುವ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದಿಲ್ಲಿಯ ರೌಸ್ ಅವೆನ್ಯೂ ನ್ಯಾಯಾಲಯ ಇಂದು ಎಪ್ರಿಲ್ 15ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ.
ಇಂದು ಕೇಜ್ರಿವಾಲ್ ಅವರ ಈಡಿ ಕಸ್ಟಡಿ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಅವರನ್ನು ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ಸಿಬಿಐ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ಹಾಜರುಪಡಿಸಲಾಯಿತು.
ಮಾರ್ಚ್ 22ರಂದು ವಿಚಾರಣಾ ನ್ಯಾಯಾಲಯವು ಕೇಜ್ರಿವಾಲ್ ಅವರನ್ನು ಆರು ದಿನಗಳ ಇಡಿ ಕಸ್ಟಡಿಗೆ ವಹಿಸಿದ್ದರೆ ನಂತರ ಅದನ್ನು ಇನ್ನೂ ನಾಲ್ಕು ದಿನಗಳ ಕಾಲ ವಿಸ್ತರಿಸಲಾಗಿತ್ತು.