ಮಾನಹಾನಿ ಪ್ರಕರಣ: ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಶಿಕ್ಷೆ ಆದೇಶ ಎತ್ತಿ ಹಿಡಿದ ದಿಲ್ಲಿ ಹೈಕೋರ್ಟ್
ವಿ.ಕೆ.ಸಕ್ಸೇನಾ , ಮೇಧಾ ಪಾಟ್ಕರ್ | PC : X
ಹೊಸದಿಲ್ಲಿ: ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ದಾಖಲಿಸಿದ್ದ ಮಾನಹಾನಿ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಮಂಗಳವಾರ ದಿಲ್ಲಿ ಹೈಕೋರ್ಟ್ ಎತ್ತಿ ಹಿಡಿದಿದೆ.
ವಿಚಾರಣಾ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ರದ್ದುಗೊಳಿಸುವಂತೆ ಮೇಧಾ ಪಾಟ್ಕರ್ ಅವರು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾ. ಶೈಲೇಂದ್ರ ಕೌರ್, “ಈ ಪ್ರಕರಣದಲ್ಲಿ ಯಾವುದೇ ಹಸ್ತಕ್ಷೇಪದ ಅಗತ್ಯವಿಲ್ಲ” ಎಂದು ಅಭಿಪ್ರಾಯಪಟ್ಟರು.
“ಸೆಷನ್ಸ್ ನ್ಯಾಯಾಲಯದ ತೀರ್ಪಿನಲ್ಲಿ ಯಾವುದೇ ಅಕ್ರಮ ಕಂಡು ಬಂದಿಲ್ಲ. ಈ ತೀರ್ಪಿನಲ್ಲಿ ಯಾವುದೇ ಹಸ್ತಕ್ಷೇಪದ ಅಗತ್ಯ ಕಂಡುಬಾರದೆ ಇರುವುದರಿಂದ, ಮೇಲ್ಮನವಿಯನ್ನು ವಜಾಗೊಳಿಸಲಾಗುತ್ತಿದೆ” ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಗುಜರಾತ್ ನಲ್ಲಿ ಸರಕಾರೇತರ ಸಂಸ್ಥೆ ನಡೆಸುತ್ತಿದ್ದ ವಿ.ಕೆ.ಸಕ್ಸೇನಾ, 23 ವರ್ಷಗಳ ಹಿಂದೆ ಮೇಧಾ ಪಾಟ್ಕರ್ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದರು.