×
Ad

ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಗೆ ದಿಲ್ಲಿ ಹೈಕೋರ್ಟ್ ಜಾಮೀನು

Update: 2023-07-12 11:45 IST

ಹೊಸದಿಲ್ಲಿ: 2020 ರ ಈಶಾನ್ಯ ದಿಲ್ಲಿ ಗಲಭೆಗೆ ಸಂಬಂಧಿಸಿದ ಐದು ಪ್ರಕರಣಗಳಲ್ಲಿ ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್ ಅವರಿಗೆ ದಿಲ್ಲಿ ಹೈಕೋರ್ಟ್ ಇಂದು ಜಾಮೀನು ನೀಡಿದೆ.

ಫೆಬ್ರವರಿ 24, 2020 ರಂದು ಈಶಾನ್ಯ ದಿಲ್ಲಿಯಲ್ಲಿ ಪೌರತ್ವ ಕಾನೂನು ಬೆಂಬಲಿಗರು ಹಾಗೂ ಪ್ರತಿಭಟನಾಕಾರರ ನಡುವಿನ ಹಿಂಸಾಚಾರವು ನಿಯಂತ್ರಣ ತಪ್ಪಿದ ನಂತರ ಕೋಮು ಘರ್ಷಣೆಗಳು ಭುಗಿಲೆದ್ದವು. ಘಟನೆಯಲ್ಲಿ ಕನಿಷ್ಠ 53 ಜನರು ಸಾವನ್ನಪ್ಪಿದರು ಹಾಗೂ ಸುಮಾರು 700 ಜನರು ಗಾಯಗೊಂಡರು.

"ಎಲ್ಲಾ 5 ಎಫ್ ಐ ಆರ್ ಗಳಲ್ಲಿ ಷರತ್ತುಗಳಿಗೆ ಒಳಪಟ್ಟು ಜಾಮೀನು ನೀಡಲಾಗಿದೆ" ಎಂದು ನ್ಯಾಯಮೂರ್ತಿ ಅನೀಶ್ ದಯಾಳ್ ಅವರು ಬುಧವಾರ ಪ್ರಕರಣಗಳಲ್ಲಿ ತಾಹೀರ್ ಹುಸೇನ್ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳ ತೀರ್ಪಿನ ವೇಳೆ ಪ್ರಕಟಿಸಿದರು.

ಫೆಬ್ರವರಿ 2020 ರಲ್ಲಿ ನಡೆದ ಹಿಂಸಾಚಾರದ ಸಂದರ್ಭದಲ್ಲಿ ಉಂಟಾದ ಗಲಭೆ ಆರೋಪಕ್ಕೆ ಸಂಬಂಧಿಸಿ ಮಾಜಿ ಕೌನ್ಸಿಲರ್ ವಿರುದ್ಧದ ಪ್ರಕರಣಗಳು ದಾಖಲಾಗಿದ್ದವು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News