×
Ad

ಟೆಲಿಗ್ರಾಮ್‌ಗೆ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿದ ಕೇಂದ್ರ ಸರಕಾರದ ಕ್ರಮವನ್ನು ಎತ್ತಿಹಿಡಿದ ದಿಲ್ಲಿ ಹೈಕೋರ್ಟ್

Update: 2026-06-19 11:26 IST

ಸಾಂದರ್ಭಿಕ ಚಿತ್ರ (AI)

ಹೊಸದಿಲ್ಲಿ: NEET-UG 2026 ಮರುಪರೀಕ್ಷೆಗೆ ಮುಂಚಿತವಾಗಿ ಭಾರತದಲ್ಲಿ ಟೆಲಿಗ್ರಾಮ್‌ ಅನ್ನು ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿದ ಕೇಂದ್ರ ಸರಕಾರದ ನಿರ್ಧಾರವನ್ನು ದಿಲ್ಲಿ ಹೈಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ.

ಮಾಹಿತಿ ತಂತ್ರಜ್ಞಾನ ಕಾಯಿದೆ-2000ರ ಸೆಕ್ಷನ್ 69A ಅಡಿಯಲ್ಲಿ ನೀಡಲಾದ ನಿರ್ಬಂಧದ ಆದೇಶವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ತೇಜಸ್ ಕರಿಯಾ ಅವರ ಪೀಠವು ಸರಕಾರದ ಆದೇಶವನ್ನು ಎತ್ತಿ ಹಿಡಿದಿದೆ.

ಸರಕಾರದ ಆದೇಶವು ಅಸಮಂಜಸ ಅಥವಾ ಅತಿಯಾದ ಕ್ರಮವಾಗಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ತೀರ್ಪು ನೀಡುವ ವೇಳೆ ನ್ಯಾಯಪೀಠವು ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ನೀಟ್–ಯುಜಿ ಮರುಪರೀಕ್ಷೆಗೂ ಮುನ್ನ, ನಕಲಿ ಪ್ರಶ್ನೆಪತ್ರಿಕೆಗಳ ಹರಡುವಿಕೆ, ತಪ್ಪು ಮಾಹಿತಿ ಮತ್ತು ಪತ್ರಿಕೆ ಸೋರಿಕೆ ವದಂತಿಗಳನ್ನು ತಡೆಯಲು ಕೇಂದ್ರ ಸರಕಾರ ದೇಶದಾದ್ಯಂತ ಜೂನ್ 22ರವರೆಗೆ ಟೆಲಿಗ್ರಾಮ್ ಬಳಕೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿತ್ತು. ಇದನ್ನು ಪ್ರಶ್ನಿಸಿ ಟೆಲಿಗ್ರಾಮ್ ನ್ಯಾಯಾಲಯದ ಮೊರೆ ಹೋಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News