×
Ad

ದಿಲ್ಲಿ | ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಪತ್ನಿಯನ್ನು ಗುಂಡಿಕ್ಕಿ ಹತ್ಯೆಗೈದ ಪೊಲೀಸ್ ಕಾನ್ಸ್‌ಟೇಬಲ್

Update: 2026-07-13 23:24 IST

Photo : ndtv

ಹೊಸದಿಲ್ಲಿ, ಜು. 12: ದಿಲ್ಲಿಯ ಕಲ್ಯಾಣಪುರಿಯ ರಸ್ತೆಯಲ್ಲಿ ರವಿವಾರ ಸಂಜೆ ಪೊಲೀಸ್ ಕಾನ್ಸ್ಟೇಬಲ್ ಒಬ್ಬ ತನ್ನ ಹೆಂಡತಿಯನ್ನು ಗುಂಡಿಕ್ಕಿ ಕೊಲೆಗೈದಿದ್ದಾನೆ.

ಗಂಡ ಮತ್ತು ಹೆಂಡತಿ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದರು, ಆಗ ಅವರ ನಡುವೆ ಜಗಳ ಸಂಭವಿಸಿತು ಎಂದು ಪೊಲೀಸರು ತಿಳಿಸಿದ್ದಾರೆ. ಆಗ ಪೊಲೀಸ್ ಕಾನ್ಸ್ಟೇಬಲ್ ನಡು ರಸ್ತೆಯಲ್ಲಿ ಸ್ಕೂಟರ್ ನಿಲ್ಲಿಸಿ ಹೆಂಡತಿಯ ಮೇಲೆ ಗುಂಡು ಹಾರಿಸಿದನು ಎಂದು ಅವರು ಹೇಳಿದ್ದಾರೆ.

ಮಹಿಳೆ ರಸ್ತೆಗೆ ಬಿದ್ದಾಗ ಅವರನ್ನು ಅಲ್ಲಿಯೇ ಬಿಟ್ಟು ಪೊಲೀಸ್ ಕಾನ್ಸ್ಟೇಬಲ್ ಪರಾರಿಯಾಗಿದ್ದಾನೆ.

ಈ ಘಟನೆಯನ್ನು ನೋಡಿದ ನಾಲ್ಕೈದು ದಾರಿಹೋಕರು ಮಹಿಳೆಯನ್ನು ರಿಕ್ಷಾದಲ್ಲಿ ಸಮೀಪದ ಆಸ್ಪತ್ರೆಯೊಂದಕ್ಕೆ ಕರೆದೊಯ್ದರು. ಆಸ್ಪತ್ರೆಯಲ್ಲಿ ಮಹಿಳೆ ಕೊನೆಯುಸಿರೆಳೆದರು.

ಪರಾರಿಯಾಗಿರುವ ಕಾನ್ಸ್ಟೇಬಲ್‌ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News