ದಿಲ್ಲಿ ಪ್ರತಿಭಟನೆ | ಅಭಿಜೀತ್ ದೀಪ್ಕೆ ಸೇರಿದಂತೆ ಮೂವರು CJP ನಾಯಕರ ಬಿಡುಗಡೆ
ಒಂದು ವರ್ಷದವರೆಗೆ ಶಾಂತಿಭಂಗ ಮಾಡದಂತೆ ಷರತ್ತು
Photo | indiatoday
ಹೊಸದಿಲ್ಲಿ: ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದಿದ್ದ ಸಿಜೆಪಿ (CJP) ನಾಯಕರಾದ ಅಭಿಜೀತ್ ದೀಪ್ಕೆ, ಅಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರನ್ನು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಬಿಡುಗಡೆ ಮಾಡಿದ್ದಾರೆ.
ಪೊಲೀಸ್ ವಶದಲ್ಲಿದ್ದ ಮೂವರನ್ನು ದಿಲ್ಲಿ ಕಾಂಟ್ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು. ಬಳಿಕ ಅವರನ್ನು ಬಿಡುಗಡೆ ಮಾಡಲಾಗಿದೆ.
ಒಂದು ವರ್ಷದವರೆಗೆ ಶಾಂತಿಭಂಗ ಮಾಡದಂತೆ ಷರತ್ತಿನಲ್ಲಿ CJP ನಾಯಕರ ಬಿಡುಗಡೆ
ಒಂದು ವರ್ಷದವರೆಗೆ ಶಾಂತಿಭಂಗ ಮಾಡಬಾರದು ಎಂಬ ಷರತ್ತಿನ ಮೇರೆಗೆ, 'ಕಾಕ್ರೋಚ್ ಜನತಾ ಪಾರ್ಟಿ'ಯ (CJP) ನಾಯಕರಾದ ಅಭಿಜಿತ್ ದೀಪ್ಕೆ, ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ದಿಲ್ಲಿಯ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರವಿವಾರ ಪೊಲೀಸ್ ವಶದಿಂದ ಬಿಡುಗಡೆ ಮಾಡಿದೆ.