NEET ವಿವಾದ : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಸರಕಾರ
Update: 2026-07-25 14:37 IST
ಹೊಸದಿಲ್ಲಿ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ಪತ್ರವನ್ನು ನೀಡಿದ್ದಾರೆ.
ಕಾಕ್ರೋಚ್ ಜನತಾ ಪಕ್ಷ ಮತ್ತು ಕೇಂದ್ರದ ನಡುವಿನ ಮೂರನೇ ಸುತ್ತಿನ ಮಾತುಕತೆಗೆ ಕೆಲವೇ ಗಂಟೆಗಳ ಮೊದಲು ಅವರು ತಮ್ಮ ಎಕ್ಸ್ ಖಾತೆಯಲ್ಲಿ ರಾಜೀನಾಮೆಯನ್ನು ಘೋಷಿಸಿದ್ದಾರೆ.
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಒಂದು ತಿಂಗಳಿನಿಂದ ದಿಲ್ಲಿಯ ಜಂತರ್ ಮಂತರ್‌ನಲ್ಲಿ ಬೀಡುಬಿಟ್ಟಿರುವ ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿತ್ತು.