×
Ad

ಎಎಪಿಯೊಂದಿಗೆ ಮೈತ್ರಿಗೆ ಅಸಮಾಧಾನ: ದಿಲ್ಲಿ ಕಾಂಗ್ರೆಸ್ ಮುಖ್ಯಸ್ಥ ರಾಜೀನಾಮೆ

Update: 2024-04-28 10:55 IST

ಹೊಸದಿಲ್ಲಿ : ಆಮ್ ಆದ್ಮಿ ಪಕ್ಷ (ಎಎಪಿ) ಜೊತೆಗಿನ ಮೈತ್ರಿಗೆ ಅಸಮಾಧಾನ ವ್ಯಕ್ತಪಡಿಸಿರುವ ದಿಲ್ಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ರವಿವಾರ ರಾಜೀನಾಮೆ ನೀಡಿದ್ದಾರೆ.

"ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು, ಕಪೋಲಕಲ್ಪಿತ ಮತ್ತು ದುರುದ್ದೇಶಪೂರಿತ ಭ್ರಷ್ಟಾಚಾರ ಆರೋಪಗಳನ್ನು ಹೊರಿಸುವ ಏಕೈಕ ಆಧಾರದ ಮೇಲೆ ರಚಿಸಲಾದ ಪಕ್ಷದೊಂದಿಗಿನ ಮೈತ್ರಿಗೆ ದಿಲ್ಲಿ ಕಾಂಗ್ರೆಸ್ ಘಟಕವು ವಿರುದ್ಧವಾಗಿತ್ತು. ಅದರ ಹೊರತಾಗಿಯೂ, ಪಕ್ಷವು ದಿಲ್ಲಿಯಲ್ಲಿ ಎಎಪಿ ಜೊತೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ಮಾಡಿತು ಎಂದು" ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News