ಈರೋಡ್ ಸಂಸದ ಆತ್ಮಹತ್ಯೆಗೆ ಯತ್ನ? ಆರೋಗ್ಯ ಸ್ಥಿತಿ ಗಂಭೀರ
Update: 2024-03-24 18:17 IST
Photo : NDTV
ಚೆನ್ನೈ: ತಮಿಳುನಾಡಿನ ಈರೋಡ್ ಸಂಸದ ಎ. ಗಣೇಶಮೂರ್ತಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು, ಅವರನ್ನು ಕೊಯಂಬತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿಯಾಗಿದೆ.
ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.ಗಣೇಶಮೂರ್ತಿ ಅವರು 2019ರಲ್ಲಿ ಡಿಎಂಕೆ ಟಿಕೆಟ್ ನಿಂದ ಈರೋಡ್ ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿದ್ದರು.
ಇತ್ತೀಚೆಗೆ ಮಾನಸಿಕವಾಗಿ ನೊಂದಿದ್ದ ಅವರು ರವಿವಾರ ಬೆಳಿಗ್ಗೆ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆ ಯತ್ನದ ಬಗ್ಗೆ ಅವರ ಕುಟುಂಬದವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
ಡಿಎಂಕೆ ಈ ಬಾರಿ ಈರೋಡ್ ಲೋಕಸಭಾ ಕ್ಷೇತ್ರಕ್ಕೆ ಗಣೇಶಮೂರ್ತಿ ಅವರ ಬದಲಿಗೆ ಕೆ ಇ ಪ್ರಕಾಶ್ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದೆ.