×
Ad

ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ಆದೇಶಿಸಿದ ಸರಕಾರ

Update: 2023-11-30 22:15 IST

ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದಿರುವ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣದ ತನಿಖೆಯನ್ನು ಸರಕಾರ ಸಿಐಡಿಗೆ ವಹಿಸಿದೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸಂಜೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಪ್ರಕರಣದ ತನಿಖೆಯನ್ನು ಸಿಐಡಿ ಮೂಲಕ ನಡೆಸುವಂತೆ ಸೂಚಿಸಿದರು.

ಮಂಡ್ಯ, ಮೈಸೂರು, ರಾಮನಗರ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಅಧಿಕ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ನಡೆದಿದ್ದು, ಈ ಸಂಬಂಧ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣಾ ಪೊಲೀಸರು ಇತ್ತೀಚಿಗೆ 9 ಮಂದಿ ಆರೋಪಗಳನ್ನು ಬಂಧಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News