ಮನ ಕರಗಿಸುವ ವೀಡಿಯೊ ಮೂಲಕ ವಿದ್ಯಾರ್ಥಿಗಳ ಬುದ್ಧಿವಂತಿಕೆಯನ್ನು ಅವಮಾನಿಸಬೇಡಿ : ಪ್ರಧಾನಿಯವರ ವೀಡಿಯೊ ಸಂದೇಶದ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ
ರಾಹುಲ್ ಗಾಂಧಿ | Photo Credit : PTI
ಹೊಸದಿಲ್ಲಿ : ನೀಟ್ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಡರಾತ್ರಿ ಬಿಡುಗಡೆ ಮಾಡಿದ ವೀಡಿಯೊ ಸಂದೇಶದ ಬಗ್ಗೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ .
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಇನ್ನಷ್ಟು ಕಠಿಣ ಕ್ರಮಗಳನ್ನು ಶುಕ್ರವಾರ ನಡೆಯಲಿರುವ ಕೇಂದ್ರ ಸಂಪುಟ ಸಭೆಯಲ್ಲಿ ಪ್ರಕಟಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿಯವರು ವೀಡಿಯೊ ಸಂದೇಶದಲ್ಲಿ ಹೇಳಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, “ಮೋದಿಯವರೆ, ನಮ್ಮ ವಿದ್ಯಾರ್ಥಿಗಳು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.
ಮುಂದುವರಿದು , ತಡರಾತ್ರಿಯ ಈ ಮನ ಕರಗಿಸುವ ವೀಡಿಯೊ ಮೂಲಕ ವಿದ್ಯಾರ್ಥಿಗಳ ಬುದ್ಧಿವಂತಿಕೆಯನ್ನು ಅವಮಾನಿಸಬೇಡಿ ಎಂದು ಅವರು ತೀಕ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು . ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರಿಗೆ ಶಿಕ್ಷೆ ವಿಧಿಸಬೇಕು. ಮತ್ತು ಈ ಘಟನೆಯ ಬಗ್ಗೆ ಕ್ಷಮೆಯಾಚಿಸಬೇಕು ಎಂದು ರಾಹುಲ್ ಗಾಂಧಿ ಮತ್ತೊಮ್ಮೆ 3 ಬೇಡಿಕೆಗಳನ್ನು ಪುನರುಚ್ಚರಿಸಿದರು.
Mr. Modi, our students are demanding Dharmendra Pradhan’s resignation.
— Rahul Gandhi (@RahulGandhi) July 23, 2026
Don’t insult their intelligence with this pathetic midnight video.
1. Sack Pradhan.
2. Punish those who beat students.
3. Apologise https://t.co/7SLB6pQqZx