×
Ad

ಇಂಡಿಗೋ ವಿಮಾನದಲ್ಲಿ ಗಗನಸಖಿಗೆ ಲೈಂಗಿಕ ಕಿರುಕುಳ : ಆರೋಪಿ ಪ್ರಯಾಣಿಕನ ಬಂಧನ

Update: 2025-05-04 19:08 IST

Photo | PTI

ಹೊಸದಿಲ್ಲಿ: ದಿಲ್ಲಿಯಿಂದ ಶಿರಡಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಗಗನಸಖಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪ್ರಯಾಣಿಕನೋರ್ವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕ ವಿಮಾನದ ಶೌಚಾಲಯದ ಬಳಿ ಗಗನಸಖಿ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ. ಪ್ರಯಾಣಿಕನ ದುರ್ನಡತೆ ಬಗ್ಗೆ ಗಗನಸಖಿ ಸಿಬ್ಬಂದಿ ವ್ಯವಸ್ಥಾಪಕರಿಗೆ ದೂರು ನೀಡಿದ್ದಾರೆ. ವಿಮಾನ ಶಿರಡಿ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ ಅವರು ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದರು. ಬಳಿಕ ಆರೋಪಿಯನ್ನು ಬಂಧಿಸಿ ರಹತಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.

ಆರೋಪಿ ಪ್ರಯಾಣಿಕನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಯಾಣಿಕ ಮದ್ಯ ಸೇವಿಸಿರುವುದು ದೃಢಪಟ್ಟಿದೆ.

ಘಟನೆ ಬೆನ್ನಲ್ಲೇ ಪ್ರತಿಕ್ರಿಯಿಸಿದ ಇಂಡಿಗೋ, ಎಲ್ಲರಿಗೂ ಸುರಕ್ಷಿತ ಮತ್ತು ಗೌರವಯುತವಾದ ವಾತಾವರಣ ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ ಮತ್ತು ಉಂಟಾದ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News