ದಿಲ್ಲಿಯಲ್ಲಿ 4.4 ತೀವ್ರತೆಯ ಭೂಕಂಪ : ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದ ಅನುಭವ
Update: 2025-07-10 09:56 IST
Photo | timesofindia
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ 4.4 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಉತ್ತರ ಭಾರತದ ಹಲವೆಡೆ ಭೂ ಕಂಪನದ ಅನುಭವವಾಗಿದೆ.
ದಿಲ್ಲಿಯ ಹಲವಾರು ಪ್ರದೇಶಗಳಲ್ಲಿ ಬೆಳಿಗ್ಗೆ 9.04ಕ್ಕೆ ಭೂಮಿ ಕಂಪಿಸಿದೆ. ಪಶ್ಚಿಮ ಉತ್ತರ ಪ್ರದೇಶದ ಮೀರತ್ ಮತ್ತು ಶಾಮ್ಲಿಯಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಜನರು ಭಯಗೊಂಡು ಮನೆಯಿಂದ ಹೊರ ಬಂದಿದ್ದಾರೆ.
ರಾಷ್ಟ್ರೀಯ ಭೂಕಂಪನಶಾಸ್ತ್ರ ಕೇಂದ್ರದ ಪ್ರಕಾರ, ದಿಲ್ಲಿಯಲ್ಲಿ ಸಂಭವಿಸಿದ ಭೂಕಂಪವು 4.4 ತೀವ್ರತೆಯಲ್ಲಿತ್ತು ಮತ್ತು ಅದರ ಕೇಂದ್ರಬಿಂದು ಹರ್ಯಾಣದ ಜಜ್ಜರ್‌ನಲ್ಲಿ 10 ಕಿಲೋಮೀಟರ್ ಆಳದಲ್ಲಿದೆ.