×
Ad

ದೇಶವ್ಯಾಪಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಘೋಷಣೆ;ನಾಳೆ ಅ.27ರಂದು ಚುನಾವಣಾ ಆಯೋಗದಿಂದ ಪತ್ರಿಕಾಗೋಷ್ಠಿ

Update: 2025-10-26 18:06 IST

Photo: PTI file

ಹೊಸದಿಲ್ಲಿ ಅ.26: ದೇಶದಾದ್ಯಂತ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತ ಮಹತ್ವದ ಪ್ರಕಟಣೆಯನ್ನು ಚುನಾವಣಾ ಆಯೋಗವು ಅಕ್ಟೋಬರ್ 27, ಸೋಮವಾರ ಸಂಜೆ ನಡೆಸಲಿರುವ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮತದಾರರ ಪಟ್ಟಿಯ ನವೀಕರಣ, ಹೊಸ ಮತದಾರರ ಸೇರ್ಪಡೆ ಹಾಗೂ ದಾಖಲೆಗಳ ಪರಿಶೀಲನೆಗೆ ಸಂಬಂಧಿಸಿದ ಕ್ರಮಗಳ ಕುರಿತು ಪ್ರಮುಖ ನಿರ್ಧಾರಗಳನ್ನು ಆಯೋಗ ಪ್ರಕಟಿಸುವ ನಿರೀಕ್ಷೆಯಿದೆ.

ಆಯೋಗದ ಮೂಲಗಳಿಂದ ಲಭಿಸಿದ ಮಾಹಿತಿಯ ಪ್ರಕಾರ, 2026ರ ವಿಧಾನಸಭಾ ಚುನಾವಣೆಗಳು ನಡೆಯಲಿರುವ 10 ರಿಂದ 15 ರಾಜ್ಯಗಳನ್ನು ಒಳಗೊಂಡಂತೆ SIR ಪ್ರಕ್ರಿಯೆಯ ಮೊದಲ ಹಂತವನ್ನು ಈ ವೇಳೆ ಘೋಷಿಸುವ ಸಾಧ್ಯತೆಯಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಮುಂದಿನ ವರ್ಷ ಚುನಾವಣೆಗೆ ತೆರಳಲಿರುವ ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳಲ್ಲಿ ಚುನಾವಣೆ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News