×
Ad

ಕೆಮ್ಮಿನ ಸಿರಪ್ ಸೇವಿಸಿ ಮಕ್ಕಳು ಮೃತಪಟ್ಟ ಪ್ರಕರಣ | ಕೋಲ್ಡ್ರಿಫ್ ತಯಾರಕರು, ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳಿಗೆ ಸೇರಿದ 7 ಸ್ಥಳಗಳ ಮೇಲೆ ಈಡಿ ದಾಳಿ

Update: 2025-10-13 10:33 IST

Photo | indiatoday

ಹೊಸದಿಲ್ಲಿ : ಶ್ರೀಸನ್ ಫಾರ್ಮಾ ಮತ್ತು ತಮಿಳುನಾಡು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳಿಗೆ ಸಂಬಂಧಿಸಿದ ಚೆನ್ನೈನ ಏಳು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಧ್ಯಪ್ರದೇಶದಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಸೇವಿಸಿದ ಬಳಿಕ ಕನಿಷ್ಠ 22 ಮಕ್ಕಳು ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಕೋಲ್ಡ್ರಿಫ್ ಸಿರಪ್ ಉತ್ಪಾದಿಸಿದ ಚೆನ್ನೈ ಮೂಲದ ಶ್ರೀಸನ್ ಫಾರ್ಮಾ ಮಾಲಕ ಜಿ.ರಂಗನಾಥನ್ ಎಂಬಾತನನ್ನು ಬಂಧಿಸಲಾಗಿದೆ.

ತಮಿಳುನಾಡಿನ  ಔಷಧ ನಿಯಂತ್ರಣ ಇಲಾಖೆಯ ಹಿರಿಯ ಅಧಿಕಾರಿಗಳ ನಿವಾಸ ಮತ್ತು ವಿಷಕಾರಿ ಸಿರಪ್ ತಯಾರಿಸಿದ ಶ್ರೀಸನ್ ಫಾರ್ಮಾಗೆ ಸಂಬಂಧಿಸಿದ ಸ್ಥಳಗಳಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ಶೋಧ ನಡೆಸಲಾಗಿದೆ ಎಂದು ಈಡಿ ಅಧಿಕಾರಿಗಳು ತಿಳಿಸಿದ್ದಾರೆ.



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News