ಮುಂಬೈ: ಅನಿಲ್ ಅಂಬಾನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಈಡಿ ದಾಳಿ
Update: 2025-07-24 11:48 IST
ಅನಿಲ್ ಅಂಬಾನಿ (Photo: PTI)
ಮುಂಬೈ : ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರಿಗೆ ಸೇರಿದ ಹಲವಾರು ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.
ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ನಿರ್ದೇಶಕ ಅನಿಲ್ ಡಿ ಅಂಬಾನಿ ಅವರನ್ನು 'ವಂಚಕ' ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಗುರುತಿಸಿದ ಬೆನ್ನಲ್ಲೇ ಈ ದಾಳಿ ನಡೆದಿದೆ.
ಅಂಬಾನಿ ಅವರ ವೈಯಕ್ತಿಕ ನಿವಾಸದಲ್ಲಿ ಶೋಧ ಕಾರ್ಯಾಚರಣೆ ನಡೆದಿಲ್ಲ. ಆದರೆ ಈಡಿ ತಂಡಗಳು ಅನಿಲ್ ಅಂಬಾನಿಗೆ ಸಂಬಂಧಿಸಿದ ಕೆಲವು ಕಂಪೆನಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದೆ ಎಂದು ತಿಳಿದು ಬಂದಿದೆ.
ಈ ದಾಳಿಯು ರಿಲಯನ್ಸ್ ಗ್ರೂಪ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದೆ ಎಂದು ಹೇಳಲಾಗಿದೆ.