ಮಲಪ್ಪುರಂ ಸೇರಿದಂತೆ ವಿವಿಧೆಡೆ ಎಸ್‌ಡಿಪಿಐ ಕಚೇರಿಗಳ ಮೇಲೆ ED ದಾಳಿ
ಮಲಪ್ಪುರಂ : ಕೇರಳದ ಮಲಪ್ಪುರಂನಲ್ಲಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಚೇರಿ ಸೇರಿದಂತೆ ಎಸ್‌ಡಿಪಿಐಗೆ ಸೇರಿದ 11 ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.
ಮಲಪ್ಪುರಂ ಎಸ್‌ಡಿಪಿಐ ಕಚೇರಿಯ ಮೇಲೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಎಸ್‌ಡಿಪಿಐಗೆ ಸಂಬಂಧಿಸಿದ 11 ಕೇಂದ್ರಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ ಎಂದು ಈಡಿ ಅಧಿಕಾರಿಗಳು ತಿಳಿಸಿದ್ದಾರೆ.
ಎಸ್‌ಡಿಪಿಐ ಕಚೇರಿ ಮೇಲೆ ರಾಷ್ಟ್ರವ್ಯಾಪಿ ಶೋಧದ ಭಾಗವಾಗಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.
ಇತ್ತೀಚೆಗೆ ಎಸ್ ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾನೂನಿನ ಅಡಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಈ ಬೆಳವಣಿಗೆ ಮಲಪ್ಪುರಂ ಸೇರಿದಂತೆ ದೇಶವ್ಯಾಪಿ ಎಸ್‌ಡಿಪಿಐ ಕಾರ್ಯಕರ್ತರ ಪ್ರತಿಭಟನೆಗೆ ಕಾರಣವಾಯಿತು.