×
Ad

ರಾಜಸ್ಥಾನದಲ್ಲಿ ಪ್ರಧಾನಿ ಮೋದಿಯವರ ದ್ವೇಷ ಭಾಷಣಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ ಚುನಾವಣಾ ಆಯೋಗ

Update: 2024-04-22 20:43 IST

ನರೇಂದ್ರ ಮೋದಿ | PC : PTI 

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಕುರಿತು ಪ್ರತಿಕ್ರಿಯಿಸಲು ಚುನಾವಣಾ ಆಯೋಗ ಸೋಮವಾರ ನಿರಾಕರಿಸಿದೆ ಎಂದು indianexpress.com ವರದಿ ಮಾಡಿದೆ.

ಬನ್ಸ್ವಾರಾದಲ್ಲಿ ರವಿವಾರ ಪ್ರಧಾನಿಯವರ ಭಾಷಣಕ್ಕೆ ಸಂಬಂಧಿಸಿದ ಪ್ರಶ್ನೆಗಳಿಗೆ ನಾವು ಪ್ರತಿಕ್ರಿಯಿಸುವುದಿಲ್ಲ ಎಂದು ಚುನಾವಣಾ ಸಮಿತಿಯ ವಕ್ತಾರರು ತಿಳಿಸಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡಬಹುದು ಎಂದು ಮೋದಿ ರವಿವಾರ ಹೇಳಿದ್ದರು. ಪ್ರಧಾನಿ ನೀಡಿದ್ದ ಈ ಹೇಳಿಕೆ ವಿವಾದಕ್ಕೀಡಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News